Featured

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರದ ಮಟಪಾಡಿ ಗ್ರಾಮದ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರ ಬ್ರಹ್ಮಾವರ ಸರ್ಕಾರಿ ಬೋರ್ಡ್‌ ಹೈಸ್ಕೂಲ್‌ನಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಜೂನ್ 1ರಂದು ಬೆಳಿಗ್ಗೆ ಬ್ರಹ್ಮಾವರ ಬಸ್ ನಿಲ್ದಾಣದಿಂದ ಆರೋಪಿಗಳು ಬಾಲಕನನ್ನು ಅಪಹರಿಸಿ ಕೇರಳದ ತಲಪಾಡಿ ಸಮೀಪದ ಕುಂಜತ್ತೂರು ಪದವಿನಲ್ಲಿರುವ ವುಡ್ ಕಂಪೆನಿಗೆ ಬಲವಂತವಾಗಿ ಕರೆದೊಯ್ದು ಕೆಲಸಕ್ಕೆ ಸೇರಿಸಿದ್ದರೆಂದು ಆರೋಪಿಸಲಾಗಿದೆ.

ಮನೆಗೆ ಹೋಗುವುದಾಗಿ ಬಾಲಕ ಹೇಳಿದರೂ ಬಿಡದೆ, ಜೂನ್ 9ರಂದು ಆರೋಪಿಗಳಲ್ಲಿ ಒಬ್ಬನು ವೈರ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮತ್ತೊಬ್ಬ ಆರೋಪಿ ಚೂರಿ ತೋರಿಸಿ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಈ ಘಟನೆಯನ್ನು ಮತ್ತೋರ್ವ ಆರೋಪಿ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 117/2026ರಡಿ ವಿವಿಧ ಸೆಕ್ಷನ್‌ಗಳ ಅನ್ವಯ ಪುಕರಣ ದಾಖಲಾಗಿದೆ.

ಪುಕರಣದ ಆರೋಪಿಗಳಾದ ವಿಖ್ಯಾತ್ ಆಚಾರ್ಯ (19) ಹಾಗೂ ಸುಚಿತ್ ನಾಯಕ್ (20) ಅವರನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಪುಕರಣದ ಮೂರನೇ ಆರೋಪಿ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ
ಹಾಜರುಪಡಿಸಲಾಗಿದೆ.

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

28 minutes ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

36 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

44 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 hour ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

3 hours ago