ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಬ್ರಹ್ಮಾವರ ಸಮೀಪ ಗುರುವಾರ ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಬಸ್ಸಿನ ಇಡಿಸಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ಗಮನಿಸಿದ ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ್ದಾರೆ. ನಿರ್ವಾಹಕರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.
ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿದ ಕೂಡಲೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಬೆಂಕಿಯಿಂದ ಬಸ್ಸಿನ ಮುಂಭಾಗದ ಭಾಗ ಸೇರಿದಂತೆ ಕೆಲವು ಉಪಕರಣಗಳಿಗೆ ಹಾನಿಯಾಗಿದ್ದು, ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…