ಬ್ರಹ್ಮಾವರ : ಬೆಳ್ಳಂಬೆಳಿಗ್ಗೆ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಈ ಜಗಳ ತಾರಕಕ್ಕೇರಿ ಪತಿ ಪತ್ನಿಗೆ ಹೊಡೆದ ಪರಿಣಾಮ, ಪತ್ನಿ ಸಾವನ್ನಪ್ಪಿದ್ದಾರೆ ಎನ್ನಲಾದ ಘಟನೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಪಡುವಳಿ ಎಂಬಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ.
ಆರೋಪಿಯನ್ನು ಸಾಸ್ತಾನ ಗುಂಡ್ಮಿ ನಿವಾಸಿ ಕಿರಣ್ ಉಪಾಧ್ಯಾಯ(30) ಎಂದು ಗುರುತಿಸಲಾಗಿದೆ. ಆತನ ಪತ್ನಿ ಜಯಶ್ರೀ(28) ಮೃತ ದುರ್ದೈವಿ.
9 ತಿಂಗಳ ಹಿಂದಷ್ಟೇ ಕಿರಣ ಉಪಾಧ್ಯಾಯ ಹಾಗೂ ಜಯಶ್ರೀ ವಿವಾಹವಾಗಿತ್ತೆನ್ನಲಾಗಿದೆ. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಕಾರ್ಕಡ ಪಡುವಳಿಯ ಮನೆಯಲ್ಲಿ ಬಾಡಿಗೆಯಲ್ಲಿ ವಾಸ ಮಾಡಿಕೊಂಡಿದ್ದರು. ಸ್ಥಳೀಯರು ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ, ಇದರಿಂದಲೇ ಪತಿ ಪತ್ನಿಗೆ ಹಲ್ಲೆ ನಡೆಸಿದ್ದಾಗ ಪತ್ನಿ ಜಯಶ್ರೀ ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನುತ್ತಿದ್ದಾರೆ.
ಜಯಶ್ರೀ ಮೃತ ದೇಹವನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…