Featured

ಬ್ರಹ್ಮಾವರ: ಪಿಗ್ಮಿ ಸಂಗ್ರಹಕನ ಹಣ ಕಳವು ಪ್ರಕರಣ; ಆರೋಪಿ ಬಂಧನ – vishwanews24

ಬ್ರಹ್ಮಾವರ: ಪಿಗ್ಮಿ ಸಂಗ್ರಹಕನ ಹಣ ಕಳವು ಪ್ರಕರಣ; ಆರೋಪಿ ಬಂಧನ

ಬ್ರಹ್ಮಾವರ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಬೈಕಿನ ಸೈಡ್ ಬಾಕ್ಸ್ ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳವು ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಂತೋಷ್‌ ಹನುಮಂತ ಕಟ್ಟಿಮನಿ (39) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ 32000ರೂ. ನಗದು ಹಾಗೂ ಮೊಬೈಲ್‌ನ್ನು ವಶಪಡಿಸಕೊಳ್ಳಲಾಗಿದೆ.

ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕರು ಆ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಟೆಲ್‌ ಎದುರುಗಡೆ ಕರ್ನಾಟಕ ಬ್ಯಾಂಕ್‌ ಎಟಿಎಮ್‌ ಬಳಿ ಪಿಗ್ಮಿ ಕಲೆಕ್ಷನ್‌ ಮಾಡಿದ ನಗದನ್ನು ಬೈಕ್ ನ ಸೈಡ್‌ ಬಾಕ್ಸ್‌ನಲ್ಲಿ ಇಟ್ಟು ಬೀಗ ಹಾಕಿ ಹೋಟೆಲ್‌ಗೆ ಹೋಗಿ ಪಿಗ್ಮಿ ಕಲೆಕ್ಷನ್‌ ಮಾಡಿದ್ದರು.

ಬಳಿಕ ವಾಪಾಸು ಬಂದು ನೋಡಿದಾಗ ಬೈಕ್ ನ ಬಾಕ್ಸ್‌ನಲ್ಲಿ ಇಟ್ಟ ನಗದು ಹಣವು ಕಾಣದೇ ಇದ್ದು ಪರಿಶೀಲಿಸಿದಾಗ ಬಾಕ್ಸ್ ನ ಬೀಗ ಒಡೆದು ಬಾಕ್ಸ್‌ನಲ್ಲಿದ್ದ ನಗದು ಹಣವನ್ನು ಮತ್ತು ಪಾನ್‌ ಕಾರ್ಡ್‌, ಆಧಾರ್‌ ಕಾರ್ಡ್‌ ಇತರೆ ದಾಖಲೆ ಪತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

24 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago