ಬ್ರಹ್ಮಾವರ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಬೈಕಿನ ಸೈಡ್ ಬಾಕ್ಸ್ ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳವು ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಂತೋಷ್ ಹನುಮಂತ ಕಟ್ಟಿಮನಿ (39) ಬಂಧಿತ ಆರೋಪಿ. ಈತನಿಂದ ಕಳವು ಮಾಡಿದ 32000ರೂ. ನಗದು ಹಾಗೂ ಮೊಬೈಲ್‌ನ್ನು ವಶಪಡಿಸಕೊಳ್ಳಲಾಗಿದೆ.
ಸೊಸೈಟಿಯೊಂದರ ಪಿಗ್ಮಿ ಸಂಗ್ರಹಕರು ಆ.4ರಂದು ಸಂಜೆ ಬ್ರಹ್ಮಾವರ ಶಿವಳ್ಳಿ ಹೋಟೆಲ್ ಎದುರುಗಡೆ ಕರ್ನಾಟಕ ಬ್ಯಾಂಕ್ ಎಟಿಎಮ್ ಬಳಿ ಪಿಗ್ಮಿ ಕಲೆಕ್ಷನ್ ಮಾಡಿದ ನಗದನ್ನು ಬೈಕ್ ನ ಸೈಡ್ ಬಾಕ್ಸ್‌ನಲ್ಲಿ ಇಟ್ಟು ಬೀಗ ಹಾಕಿ ಹೋಟೆಲ್‌ಗೆ ಹೋಗಿ ಪಿಗ್ಮಿ ಕಲೆಕ್ಷನ್ ಮಾಡಿದ್ದರು.
ಬಳಿಕ ವಾಪಾಸು ಬಂದು ನೋಡಿದಾಗ ಬೈಕ್ ನ ಬಾಕ್ಸ್‌ನಲ್ಲಿ ಇಟ್ಟ ನಗದು ಹಣವು ಕಾಣದೇ ಇದ್ದು ಪರಿಶೀಲಿಸಿದಾಗ ಬಾಕ್ಸ್ ನ ಬೀಗ ಒಡೆದು ಬಾಕ್ಸ್‌ನಲ್ಲಿದ್ದ ನಗದು ಹಣವನ್ನು ಮತ್ತು ಪಾನ್ ಕಾರ್ಡ್, ಆಧಾರ್ ಕಾರ್ಡ್ ಇತರೆ ದಾಖಲೆ ಪತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…