ಬ್ರಹ್ಮಾವರ : ಪ್ರತಿಷ್ಠಿತ ವಿದ್ಯಾ ಸಂಸ್ಥೆ ಜಿ. ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಡಾ. ಧನಂಜಯ ಸರ್ಜಿ ಮತಯಾಚನೆ – vishwanews24

Featured, ಉಡುಪಿ

ಬ್ರಹ್ಮಾವರ : ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ. ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಡಾ. ಧನಂಜಯ ಸರ್ಜಿ ಮತಯಾಚನೆ

ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ. ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಭೇಟಿ ನೀಡಿ, ಅಲ್ಲಿನ ಆಡಳಿತವರ್ಗ , ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು.

ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಭಾಗವಹಿಸಿದ್ದರು.

ಕಾರ್ಕಳ :  ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ : ಕಾರ್ಯಕರ್ತರಿಗೆ  ಸುನಿಲ್ ಕುಮಾರ್ ಕರೆ – vishwanews24

Leave a Reply