ಬ್ರಹ್ಮಾವರ: ಬಸ್ಸು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ  ಸಾವು – Vishwanews24

Featured, ಉಡುಪಿ

ಬ್ರಹ್ಮಾವರ: ಬಸ್ಸು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಸ್ಥಳದಲ್ಲೇ  ಸಾವು

ಬ್ರಹ್ಮಾವರ: ರಸ್ತೆ ದಾಟುತ್ತಿದ್ದ ಪಾದಾಚಾರಿಯೋರ್ವರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ಧರ್ಮಾವರ ಅಡಿಟೋರಿಯಮ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಹಂದಾಡಿಯ ಶೇಖರ್ ಎಂದು ಗುರುತಿಸಲಾಗಿದೆ.

ಕತ್ತಲಿನಲ್ಲಿ ರಸ್ತೆ ದಾಟುತ್ತಿದ್ದ ಶೇಖರ್ ಅವರಿಗೆ ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಗದೂತ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅವರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ : ವ್ಯಕ್ತಿ ನಾಪತ್ತೆ – Vishwanews24

 

Leave a Reply