Featured

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು ರುಡ್ ಸೆಟ್ ಕ್ರಾಸಿಂಗ್ ಬಳಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ.

ಉಡುಪಿ ಕಡೆಗೆ ತೆರಳುತ್ತಿದ್ದ ವೇಗದೂತ ಬಸ್ಸೊಂದು ದಿಢೀರನೆ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಬಸ್ಸಿನ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಖ್ಯಾತ ಹುಲಿವೇಷ ಕಲಾವಿದರೊಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರನ್ನು ಸಂತೇಕಟ್ಟೆ ಲಕ್ಷ್ಮೀನಗರದ ನಿವಾಸಿ ಮಂಜುನಾಥ್ (43) ಎಂದು ಗುರುತಿಸಲಾಗಿದೆ.

ಇವರು ಸೇರಿದಂತೆ ಲಕ್ಷ್ಮೀನಗರದ ಐದು ಮಂದಿ ಯುವಕರು ಗೋವಾದಲ್ಲಿ ನಡೆದ ಮೀಟಿಂಗ್ ಮುಗಿಸಿಕೊಂಡು ಇನ್ನೋವಾ ಕಾರಿನಲ್ಲಿ ಮನೆಗೆ ವಾಪಸಾಗುತ್ತಿದ್ದರು. ಇನ್ನೇನು ಮನೆಗೆ ತಲುಪುವಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಉಳಿದ ನಾಲ್ವರು ಯುವಕರು ಅತ್ಯಲ್ಪ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತ ಮಂಜುನಾಥ್ ಅವರು ಕರಾವಳಿ ಭಾಗದ ಪ್ರಸಿದ್ಧ ಹುಲಿ ವೇಷದ ಕಲಾವಿದರಾಗಿದ್ದರು. ಕಳೆದ ಹಲವು ವರ್ಷಗಳಿಂದ ನೂರಾರು ಹುಲಿ ವೇಷಧಾರಿಗಳಿಗೆ ಅದ್ಭುತವಾಗಿ ಬಣ್ಣ ಹಚ್ಚುವ (ಪೇಂಟಿಂಗ್) ಕಾಯಕವನ್ನು ಮಾಡುತ್ತಾ ಕಲಾ ಲೋಕದಲ್ಲಿ ಗುರುತಿಸಿಕೊಂಡಿದ್ದರು. ಸದ್ಯ ಈ ಅಪಘಾತಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

5 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

6 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

7 hours ago