Featured

ಬ್ರಹ್ಮಾವರ : ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ – Vishwanews24

ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಬ್ರಹ್ಮಾವರ: ನಮ್ಮ ಪ್ರಯತ್ನಕ್ಕೆ ದೇವರ ಅನುಗ್ರಹ ಸೇರಿದಾಗ ಮಾತ್ರವೇ ಕಾರ್ಯ ಸಫಲವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.

ಅವರು ಮಂಗಳವಾರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದಾನಿಗಳಾದ ಹೆಗ್ಗುಂಜೆ ಬಡಾಮನೆ ವಿಶ್ವನಾಥ ಹೆಗ್ಡೆ, ಹೆಗ್ಗುಂಜೆ ಚಾವಡಿಮನೆ ರುದ್ರಮ್ಮ ಹೆಗ್ಗಡ್ತಿ, ಅಮರನಾಥ ಶೆಟ್ಟಿ ಮತ್ತು ಕುಟುಂಬಸ್ಥರು ಸೇವಾರೂಪದಲ್ಲಿ ನೀಡಿದ ನೂತನ ರಜತ ರಥ ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದರು.

ನಾವು ನೀಡಿದ್ದು, ಮಾಡಿದ್ದು ಎನ್ನುವುದಕ್ಕಿಂತ ದೇವರೇ ಮಾಡಿಸಿದ್ದು ಎನ್ನುವುದು ಅರ್ಥಪೂರ್ಣ. ದುಡಿಮೆಯ ಸ್ವಲ್ಪ ಅಂಶವನ್ನು ಧಾರ್ಮಿಕ ಚಟುವಟಿಕೆ, ಸೇವಾ ಕಾರ್ಯಕ್ಕೆ ವಿನಿಯೋಗಿಸಿದಾಗ ಜೀವನ ಸಾರ್ಥಕವಾಗುತ್ತದೆ ಎಂದರು.

ಅತಿಥಿಗಳಾಗಿ ಬೆಂಗಳೂರು ವಿ.ವಿ.ಯ ವಿತ್ತಾಧಿಕಾರಿ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ, ದೇವಸ್ಥಾನದ ಆನುವಂಶಿಕ ಮೊಕ್ತೇಸರ ಎಚ್‌. ಧನಂಜಯ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಎಸ್‌.ಸಿ. ಕೊಟಾರಗಸ್ತಿ, ಹೆಗ್ಗುಂಜೆ ಚಾವಡಿಮನೆ ವಿಜಯನಾಥ ಹೆಗ್ಡೆ, ಅಮರನಾಥ ಶೆಟ್ಟಿ, ಆನುವಂಶಿಕ ಮೊಕ್ತೇಸರರಾದ ಎಚ್‌. ಸುರೇಂದ್ರ ಶೆಟ್ಟಿ, ಎಚ್‌. ಪ್ರಭಾಕರ ಶೆಟ್ಟಿ, ಎಚ್‌. ಶಂಭು ಶೆಟ್ಟಿ, ಆರ್‌. ಶ್ರೀನಿವಾಸ ಶೆಟ್ಟಿ, ಹೆಗ್ಗುಂಜೆ ನಾಲ್ಕು ಮನೆಯವರು, ಅರ್ಚಕ ವೃಂದ, ಸಿಬಂದಿ, ಭಕ್ತರು ಉಪಸ್ಥಿತರಿದ್ದರು.

ದಾನಿಗಳನ್ನು ಸಮ್ಮಾನಿಸಲಾಯಿತು. ರಥಶಿಲ್ಪಿ ರಾಜಗೋಪಾಲ ಆಚಾರ್ಯ, ರಥ ಕೊಠಡಿ ನಿರ್ಮಾಣ ಮಾಡಿದ ಕಳಿ ಚಂದ್ರಯ್ಯ ಆಚಾರ್ಯ ಮತ್ತಿತರರನ್ನು ಗೌರವಿಸಲಾಯಿತು.

ಎಚ್‌. ಉದಯ ಭಾಸ್ಕರ ಶೆಟ್ಟಿ ಸ್ವಾಗತಿಸಿ, ಎನ್‌.ಆರ್‌. ದಾಮೋದರ ಶರ್ಮ ಬಾರಕೂರು ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

14 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

14 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

16 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

16 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

17 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

17 hours ago