Featured

ಬ್ರಹ್ಮಾವರ :  ಮರುವಾಯಿ (ಕಪ್ಪೆಚಿಪ್ಪು)  ಹೆಕ್ಕಲು ಹೋಗಿ ನಾಲ್ವರು ಯುವಕರು ನೀರು ಪಾಲು – Vishwanews24

ಬ್ರಹ್ಮಾವರ :  ಮರುವಾಯಿ (ಕಪ್ಪೆಚಿಪ್ಪು)  ಹೆಕ್ಕಲು ಹೋಗಿ ನಾಲ್ವರು ಯುವಕರು ನೀರು ಪಾಲು

ಬ್ರಹ್ಮಾವರ ನದಿಯಲ್ಲಿ ಮರುವಾಯಿ ಅಥವಾ ಕಪ್ಪೆಚಿಪ್ಪು ಹೆಕ್ಕಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಘಟನೆ ಕುಕ್ಕುಡೆಕುದ್ರು ಬಳಿ ರವಿವಾರ ಸಂಜೆ ಸಂಭವಿಸಿದೆ. ಮೃತರನ್ನು ಹೂಡೆಯ ಪೈಸಾನ್‌, ಇಬಾದ್‌ ಹಾಗೂ ಅವರ ಸಂಬಂಧಿಕರಾದ ತೀರ್ಥಹಳ್ಳಿಯ ಈರ್ವರು ಮೃತಪಟ್ಟವರು ಎನ್ನಲಾಗಿದೆ.

ಈದ್ ಹಿನ್ನೆಲೆಯಲ್ಲಿ ಶೃಂಗೇರಿಯ ಯುವಕರು ಹೂಡೆಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇಂದು ಸಂಜೆ ಒಟ್ಟು ಏಳು ಮಂದಿ ನದಿಯಿಂದ ಮರುವಾಯಿ ಸಂಗ್ರಹಿಸುವ ಉದ್ದೇಶದಿಂದ ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡೆ ಕುದ್ರುವಿಗೆ ದೋಣಿಯಲ್ಲಿ ತೆರಳಿದ್ದರು. ಈ ಸಂದರ್ಭ ನಾಲ್ವರು ನೀರಿನಲ್ಲಿ ಮುಳುಗಿ ಪತ್ತೆಯಾಗಿದರೆನ್ನಲಾಗಿದೆ.

ರವಿವಾರ ಜೋರಾದ ಗಾಳಿ ಬೀಸುತ್ತಿದ್ದುದರಿಂದ ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ. ಯುವಕರ ಗುಂಪಿನ ಕಿರುಚಾಟ ಕೇಳಿ ಸ್ಥಳೀಯರಿಗೆ ವಿಚಾರ ತಿಳಿದಿದೆ. ಮೂವರು ಈಜಿಕೊಂಡು ದಡ ಸೇರಿದ್ದಾರೆ. ಬ್ರಹ್ಮಾವರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

6 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

14 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

14 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

15 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

15 hours ago