Featured

ಬ್ರಹ್ಮಾವರ : ಮಹಿಳೆಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದ ವ್ಯಕ್ತಿಯ ಹತ್ಯೆ ; ಓರ್ವನ ಬಂಧನ -Vishwanews24

ಬ್ರಹ್ಮಾವರ : ಮಹಿಳೆಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದ ವ್ಯಕ್ತಿಯ ಹತ್ಯೆ ; ಓರ್ವನ ಬಂಧನ -Vishwanews24

ಬ್ರಹ್ಮಾವರ,: ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆಯಂಗಡಿ ಎಂಬಲ್ಲಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿದ ಘಟನೆ ಫೆ.14ರ ರವಿವಾರದಂದು ನಡೆದಿದೆ.

ಮೃತರನ್ನು ಹೊಸೂರು ನಿವಾಸಿ ನವೀನ್‌‌ ನಾಯ್ಕ್‌ (43) ಎಂದು ಗುರುತಿಸಲಾಗಿದೆ.ಹತ್ಯೆಗೆ ಸಂಬಂಧಿಸಿದಂತೆ ಗೌತಮ್‌‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ರವಿವಾರ ತಡರಾತ್ರಿ ಗೌತಮ್‌ ಸೇರಿದಂತೆ ಐದಾರು ಜನರ ಗುಂಪು ನವೀನ್‌‌‌‌‌‌‌‌‌‌ನ ಮೇಲೆ ಹಲ್ಲೆ ನಡೆಸಿದ್ದು, ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಗೌತಮ್‌ಗೆ‌ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದ್ದು, ಇದನ್ನು ನವೀನ್‌ ಪ್ರಶ್ನಿಸಿದ್ದರು. ಕಳೆದ ಕೆಲವು ದಿನಗಳಿಂದ ಗೌತಮ್‌ ಮಹಿಳೆಯೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.

ಬಿಜೆಪಿ ಚುನಾವಣೆಯಲ್ಲಿ ಗೆದ್ದು ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಲಿದೆ : ಬಿಜೆಪಿ ಅಧ್ಯಕ್ಷ ದಿಲೀಪ್ ಘೋಶ್ -Vishwanews24

ನವೀನ್‌ ಹತ್ಯೆಗೆ ಸಂಬಂಧಿಸಿದಂತೆ , ಅವರ ಪುತ್ರ ನಿತಿನ್‌ ನಾಯ್ಕ್‌ (15) ಇಲ್ಲಿನ ಪೊಲೀಸ್‌‌ ಠಾಣೆಯಲ್ಲಿ ದೂರು ದಾಖಲಿಸಿದ್ದ. ಕಳೆದ ಕೆಲವು ದಿನಗಳಿಂದ ನೆರೆಮನೆಯ ಮಹಿಳೆ ಮನೆಗೆ ಬರುತ್ತಿದ್ದ ಗೌತಮ್‌‌‌ ಈ ಕೃತ್ಯ ಎಸಗಿರಬಹುದು ಎಂದು ಆರೋಪಿಸಿದ್ದಾರೆ.

ಮಹಿಳೆ ನವೀನ್‌ನ ನೆರೆಮನೆಯವಳಾಗಿದ್ದು, ಆಕೆ ತನ್ನ ಮಗ ಶರತ್‌ ಜೊತೆ ವಾಸವಿದ್ದಳು. ಮಲ್ಪೆ ನಿವಾಸಿ ಗೌತಮ್‌ ಎಂಬಾತ ಆಗಾಗೆ ಆಕೆಯ ಮನೆಗೆ ಭೇಟಿ ನೀಡುತ್ತಿದ್ದ. ಸುಮಾರು 15 ದಿನಗಳ ಹಿಂದೆ ಮಹಿಳೆ ಹಾಗೂ ಗೌತಮ್‌‌‌‌ ಗುಡ್ಡೆಯಂಗಡಿ ಕ್ರಾಸ್‌‌ ಬಳಿ ನಿಂತಿದ್ದರು. ಆಕೆಯ ಮನೆಗೆ ಭೇಟಿ ಮಾಡುತ್ತಿರುವ ಬಗ್ಗೆ ನವೀನ್‌‌‌ ಗೌತಮ್‌‌ ಬಳಿ ಕೇಳಿದ್ದಾನೆ. ಇದು ಇಬ್ಬರ ನಡುವಿನ ವಾದಕ್ಕೆ ಕಾರಣವಾಗಿತ್ತು.

ಶ್ರೀರಾಮ ಮಂದಿರದ ನಿರ್ಮಾಣ ಈ ದೇಶದ ಜನರ ಸುದೀರ್ಘ ಕನಸಾಗಿದೆ : ಡಿ.ವಿ.ಸದಾನಂದ ಗೌಡ -Vishwanews24

ಗೌತಮ್‌ನನ್ನು ನವೀನ್‌ ಪ್ರಶ್ನಿಸುವುದು ನಿಲ್ಲಿಸದಿದ್ದರೆ ಹತ್ಯೆ ಮಾಡಲು ಸಹ ಹಿಂಜರಿಯುವುದಿಲ್ಲ ಎಂದು ಮಹಿಳೆ ದೂರುದಾರರ ತಾಯಿಗೆ ತಿಳಿಸಿದ್ದಾಳೆ.

ಫೆ.14ರ ರವಿವಾರದಂದು ಕುಟುಂಬದ ಸದಸ್ಯರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಗೌತಮ್‌‌ ಹಾಗೂ ಇತರರು ನಮ್ಮ ನಿವಾಸಕ್ಕೆ ಬಂದಿದ್ದು, ಹತ್ಯೆ ಮಾಡುವ ಉದ್ದೇಶದಿಂದ ತಂದೆಯ ತಲೆಗೆ ಯಾವುದೋ ಆಯುಧದಿಂದ ಹೊಡೆದಿದ್ದಾರೆ ಎಂದು ನಿತಿನ್‌ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago