ಬ್ರಹ್ಮಾವರ: ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಸಂಭವಿಸಿದೆ.
ಹೊಸಾಳ ನಿವಾಸಿಗಳಾದ ಪ್ರಶಾಂತ (35) ಹಾಗೂ ಶ್ರೀಶಾ(21) ಸಾವನ್ನಪ್ಪಿದ ದುರ್ದೈವಿಗಳು.
ಮಂಗಳವಾರ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪ್ರಶಾಂತ್ ಹಾಗೂ ಶ್ರೀಶಾ ಮನೆ ಸಮೀಪದ ಕೂಗಳತೆ ದೂರದ ಸೀತಾ ನದಿಗೆ ಮೀನು ಹಿಡಿಯಲು ತೆರಳಿದ್ದರು. ಮೀನಿಗಾಗಿ ಬಲೆ ಹಾಕುತ್ತಿರುವ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಸಮೀಪದಲ್ಲೇ ಬಟ್ಟೆ ತೊಳೆಯುತ್ತಿದ್ದ ಮಹಿಳೆ ಗಮನಿಸಿ ಸ್ಥಳೀಯರಿಗೆ ಸುದ್ದಿ ಮುಟ್ಟಿಸಿದ್ದರು. ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲೇ ಈರ್ವರು ಸಾವನ್ನಪ್ಪಿದ್ದಾರೆ.
ಬ್ರಹ್ಮಾವರ ಠಾಣಾಧಿಕಾರಿ ಮಧು ಪಿ.ಎಸ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…