ಬ್ರಹ್ಮಾವರ: ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ – vishwanews24

Featured, ಉಡುಪಿ

ಬ್ರಹ್ಮಾವರ: ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ –  ಜೂ. 12ರ ವರೆಗೆ ನ್ಯಾಯಾಂಗ ಬಂಧನ 

ಬ್ರಹ್ಮಾವರ: ಬ್ರಹ್ಮಾವರ ಸಮೀಪ ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ ನೇತೃತ್ವದಲ್ಲಿ ಪೊಲೀಸ್‌ ನಿರೀಕ್ಷಕರಾದ ಮಂಜುನಾಥ್‌, ರಫೀಕ್‌ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕಾರ್ಕಳ: ಓವರ್ ಟೇಕ್ ಭರದಲ್ಲಿ ರಿಕ್ಷಾಗೆ ಡಿಕ್ಕಿ ಹೊಡೆದ ಬೈಕ್ – ಸವಾರ ಗಂಭೀರ – vishwanews24

ಈರ್ವರಿಗೂ ಜೂ. 12ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply