Featured

ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ: ತನಿಖೆಗೆ ಆಗ್ರಹಿಸಿ ಕೇರಳ ಸಿಎಂಗೆ ದೂರು – vishwanews24

ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ: ತನಿಖೆಗೆ ಆಗ್ರಹಿಸಿ ಕೇರಳ ಸಿಎಂಗೆ  ದೂರು ನೀಡಿದ ಬಿಜು ಮೋನ್ ಕುಟುಂಬಸ್ಥರು

ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನವೆಂಬರ್ 9ರಂದು ನಡೆದಿದ್ದ ಲಾಕಪ್ ಡೆತ್ ನಲ್ಲಿ ಮೃತಪಟ್ಟ ಕೇರಳ ಮೂಲದ ಬಿಜು ಮೋನ್ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತನಿಖೆಗೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ.

ಬಿಜು ಮೋನ್ ಮೈಮೇಲೆ ಕೆಲ ಗಾಯಗಳ ಗುರುತು, ಮೊಣಕಾಲಿನ ಕೆಳಗೆ ಕೆಲ ಗಾಯದ ಗುರುತು ಕಂಡುಬಂದಿತ್ತು ಎಂದಿರುವ ಬಿಜು ಮೋನ್ ಕುಟುಂಬಸ್ಥರು ಹೇಳಿದ್ದಾರೆ. ಲಾಕಪ್ ಡೆತ್ ಪ್ರಕರಣದ ಬಗ್ಗೆ ಸಿಒಡಿ ತನಿಖೆ ನಡೆಯುತ್ತಿದ್ದು, ಆರೋಪಿ ಕುಸಿದು ಬಿದ್ದು ಸಾವನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಬಳಿಕ ಲಾಕಪ್ ಡೆತ್ ಎಂದು ಪ್ರಕರಣ ಬೆಳಕಿಗೆ ಬಂತು ಎಂದವರು ಹೇಳಿದ್ದಾರೆ.

ಇದೊಂದು ಅಸಹಜ ಸಾವು ಎಂದು ಕೇರಳ ಮುಖ್ಯಮಂತ್ರಿಗೆ ದೂರು ನೀಡಿರುವ ಕುಟುಂಬಸ್ಥರು, ಸಿಐಡಿ ಮೂಲಕ ಕೂಲಂಕಷ ತನಿಖೆಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಐಡಿಗೂ ಪತ್ರ ಮೂಲಕ ಮನವಿ ಮಾಡಿದ್ದಾರೆ.

ನಮಗೆ ನ್ಯಾಯ ಬೇಕು, ತಪ್ಪಿತಸ್ಥ ಪೊಲೀಸರಿಗೆ ಕಠಿಣ ಶಿಕ್ಷೆಯಾಗ ಬೇಕು ಎಂದು ಆಗ್ರಹಿಸಿರುವ ಬಿಜು ಮೋನ್ ಸಹೋದರ ಬಿನು ಯೋಹನ್ನಾನ್ ಹೇಳಿದ್ದಾರೆ. ಸಿಐಡಿ ಅಧಿಕಾರಿಗಳು ಹೇಳಿಕೆ ದಾಖಲಿಸಲು ಕರೆದ ಹಿನ್ನೆಲೆಯಲ್ಲಿ ನಾವು ಉಡುಪಿಗೆ ಬಂದಿದ್ದೇವೆ ಎಂದವರು ತಿಳಿಸಿದರು.

ನನ್ನ ಸಹೋದರನನ್ನು ಪೊಲೀಸರು ಕಾನೂನು ಪ್ರಕಾರವಾಗಿ ವಶಕ್ಕೆ ಪಡೆದ ಬಗ್ಗೆ ಅನುಮಾನವಿದೆ ಎಂದ ಅವರು ಮಹಿಳೆಯೋರ್ವಳ ದೂರಿನ ಹಿನ್ನೆಲೆಯಲ್ಲಿ ನನ್ನ ಸಹೋದರನನ್ನ ಬಂಧಿಸಲಾಗಿದೆ ಎಂದಿದ್ದರು. ಆದರೆ ದೂರು ಕೊಟ್ಟ ಮಹಿಳೆ, ಅವರ ಕೊಟ್ಟ ದೂರಿನ ಪ್ರತಿಯ ಬಗ್ಗೆ ಮಾಹಿತಿ ನೀಡಿಲ್ಲ.

ಇವೆಲ್ಲವನ್ನೂ ನಾವು ಕೇರಳ ಮುಖ್ಯಮಂತ್ರಿಯ ಗಮನಕ್ಕೆ ತಂದಿದ್ದೇವೆ. ಅಸಹಜ ಸಾವು ಎಂದು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದೇವೆ ಎಂದರು.

ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಮತಿ ಮೇರೆಗೆ ಮೃತದೇಹ ಪರಿಶೀಲಿಸಲಾಗಿತ್ತು. ದೇಹದಲ್ಲಿ ಸಾಕಷ್ಟು ಗಾಯದ ಗುರುತುಗಳು ಕಂಡು ಬಂದಿದ್ದವು. ಹೀಗಾಗಿ ಬ್ರಹ್ಮಾವರ ಪೊಲೀಸರ ಮೇಲೆ ತುಂಬಾ ಅನುಮಾನವಿದೆ ಎಂದು ಯೋಹಾನ್ನನ್ ಹೇಳಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

16 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

16 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

19 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

19 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

19 hours ago