ಬ್ರಹ್ಮಾವರ: ಲಾರಿ ಹಾಗೂ ಬೈಕ್ ಅಫಘಾತ :: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು – Vishwanews24
ಬ್ರಹ್ಮಾವರ: ಲಾರಿ ಹಾಗೂ ಬೈಕ್ ಅಫಘಾತ :: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಬ್ರಹ್ಮಾವರ: ಲಾರಿಯೊಂದನ್ನು ಒವರ್ ಟೇಕ್ ಮಾಡುವ ಸಂದರ್ಭದಲ್ಲಿ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ರಾತ್ರಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಸಮಿತ್ ಕುಮಾರ್ ಎಮ್ ಜಿ (19) ಮತ್ತು ವಾಗೀಶ್ ಕೆದ್ಲಾಯ (19) ಎಂದು ಗುರುತಿಸಲಾಗಿದೆ. ವಾಗೀಶ್ ಸಾಲಿಗ್ರಾಮದ ಚಿತ್ರಪಾಡಿ ನಿವಾಸಿಯಾಗಿದ್ದು, ಸಮಿತ ಮೂಲತಃ ಶಿವಮೊಗ್ಗದವನಾಗಿದ್ದು ಸಾಲಿಗ್ರಾಮದಲ್ಲಿ ವಾಸವಾಗಿದ್ದನು. ಮೃತ ವಿದ್ಯಾರ್ಥಿಗಳು ಉಡುಪಿಯ ಖಾಸಗಿ ಸಂಜೆ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು.
ಮಂಗಳವಾರ ಸಂಜೆ 7.30 ರ ಸುಮಾರಿಗೆ ಉಡುಪಿಯಿಂದ ಕಾಲೇಜು ಮುಗಿಸಿ ಬೈಕಿನಲ್ಲಿ ವಾಪಾಸಾಗುತ್ತಿದ್ದ ವೇಳೆ ಟ್ರಕೊಂದನ್ನು ಒವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಟ್ರಿಕ್ಕಿಗೆ ಡಿಕ್ಕಿ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದ್ದು ರಸ್ತೆಗೆ ಅಪ್ಪಳಿಸಿದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join our Whatsapp group by clicking the below link 👇👇
