ಬ್ರಹ್ಮಾವರ,:ಒಣ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಹೈ-ಟೆನ್ಷನ್ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಕುಂಜಾರು ತೆಂಕುಬೆಟ್ಟು ಎಂಬಲ್ಲಿ ನಡೆದಿದೆ.
ಒಣ ಹುಲ್ಲಿನ ಕಟ್ಟುಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ರಸ್ತೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ಹೈ-ಟೆನ್ಷನ್ ವಿದ್ಯುತ್ ತಂತಿ ತಗುಲಿದೆ. ಇದರಿಂದ ಉಂಟಾದ ಕಿಡಿ ಹಾಗೂ ಶಾರ್ಟ್ ಸರ್ಕ್ಯೂಟ್‌ನಿಂದ ಒಣ ಹುಲ್ಲಿಗೆ ತಕ್ಷಣ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತ ಚಾಲಕ, ಹೊತ್ತಿ ಉರಿಯುತ್ತಿದ್ದ ಎರಡು ಹುಲ್ಲಿನ ಕಟ್ಟುಗಳನ್ನು ರಸ್ತೆಗೆ ಎಸೆದಿದ್ದಾರೆ. ಬಳಿಕ ಸಂಚಾರ ದಟ್ಟಣೆ ಮತ್ತು ಹೆಚ್ಚಿನ ಅಪಾಯವನ್ನು ತಪ್ಪಿಸಲು ಲಾರಿಯನ್ನು ಸಮೀಪದ ಮೈದಾನಕ್ಕೆ ಚಲಾಯಿಸಿಕೊಂಡು ಹೋಗಿ ನೀರು ಸುರಿದು ಬೆಂಕಿ ನಂದಿಸಲು ಯತ್ನಿಸಿದ್ದಾರೆ
ಮಾಹಿತಿ ತಿಳಿದ ಕೂಡಲೇ ಉಡುಪಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಘಟನೆಯಿಂದ ಸುಮಾರು 1.5 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ : ಸಿದ್ದರಾಮಯ್ಯ ಸ್ಪಷ್ಟನೆ ಸೋನಿಯಾ ಗಾಂಧಿ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 5ನೇ…
ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ ಮಂಗಳೂರು: ನಗರದ ಪಂಪ್‌ವೆಲ್ ಬಳಿ ಮೊಟ್ಟೆ…
ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ…
ಶಬರಿಮಲೆಯಲ್ಲಿ ಮಂಡಲ–ಮಕರವಿಳಕ್ಕು ಯಾತ್ರೆ ಆರಂಭ ; ಅಯ್ಯಪ್ಪನ ದರ್ಶನ ಪಡೆದ ಸಾವಿರಾರು ಭಕ್ತರು ಶಬರಿಮಲೆ : ಪವಿತ್ರ ಕ್ಷೇತ್ರ ಶಬರಿಮಲೆ…
ಬೈಕಂಪಾಡಿ : ಅನೈರ್ಮಲ್ಯ ಕಾರಣ; ಚೀಸ್ ಬಾಲ್ ಸ್ನಾಕ್ಸ್ ತಯಾರಿಕಾ ಘಟಕಕ್ಕೆ ಬೀಗ ಸುರತ್ಕಲ್: ಸುರತ್ಕಲ್ ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ…
ಮಂಗಳೂರು :ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ.. ಟೇಕ್ ಆಫ್ ವೇಳೆ ಇಂಜಿನ್‌ನಲ್ಲಿ ದೋಷ .. 236 ಪ್ರಯಾಣಿಕರು ಅಪಾಯದಿಂದ…