Featured

ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ: ನಾಲ್ಕು ತನಿಖಾ ತಂಡ ರಚನೆ : ಎಸ್ಪಿ ವಿಷ್ಣುವರ್ಧನ್ -Vishwanews24

ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ: ನಾಲ್ಕು ತನಿಖಾ ತಂಡ ರಚನೆ : ಎಸ್ಪಿ ವಿಷ್ಣುವರ್ಧನ್ -Vishwanews24

ಬ್ರಹ್ಮಾವರ: ಉಪ್ಪಿನಕೋಟೆ ಕುಮ್ರಗೋಡು ಗ್ರಾಮದಲ್ಲಿರುವ ಮಿಲನ ರೆಸಿಡೆನ್ಸಿಯ ಫ್ಲ್ಯಾಟ್‌ನಲ್ಲಿ ನಡೆದಿರುವ ವಿಶಾಲಾ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಒಟ್ಟು ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌ ವಿಷ್ಣುವರ್ಧನ್‌ ತಿಳಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್, ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಹಲವಾರು ಮಂದಿಯನ್ನು ವಿಚಾರಣೆ ನಡೆಸಲಾಗಿದೆ. ಕಟ್ಟಡದಲ್ಲಿ ಯಾವುದೇ ಸಿಸಿ ಟಿವಿ ಅಳವಡಿಸದೆ ಇದ್ದು ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿಗಳ ಪರಿಶೀಲನೆ ನಡೆಯುತ್ತಿದೆ. ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago