ಉಡುಪಿ:- ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಬ್ಬು ಬೆಳೆಯುವ ರೈತರ ಏಕೈಕ ಆಶಾಕಿರಣವಾಗಿದ್ದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯು ಕಳೆದ ಹಲವಾರು ವರ್ಷದಿಂದ ಮುಚ್ಚಿದ್ದು, ಇದರಿಂದ ರೈತರಿಗೆ ಬಹಳ ತೊಂದರೆಯಾಗಿದೆ. ಆದ್ದರಿಂದ ಈ ಸಕ್ಕರೆ ಕಾರ್ಖಾನೆಯನ್ನು ಆರಂಭಿಸಲು ಸುಮಾರು ೧೦೦ ಕೋಟಿ ಅನುದಾನ ಬೇಕಾಗಿರುದರಿಂದ ಮಾನ್ಯ ಮುಖ್ಯಮಂತ್ರಿಗಳು ಮುಂದಿನ ಬಜೆಟ್‌ನಲ್ಲಿ ಈ ಅನುದಾನವನ್ನು ಒದಗಿಸಿಕೊಡಬೇಕೆಂದು ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.
ಇದನ್ನೂ ಓದಿ :
ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಅವರ ಅಧಿಕಾರವಧಿಯಲ್ಲಿ ಒದಗಿಸಿದ ೧೨ ಕೋಟಿ ಅನುದಾನದಲ್ಲಿ ರೈತರ ಬಾಕಿ ಉಳಿದ ಮೊತ್ತ ಹಾಗೂ ನೌಕರ ವೇತನಗಳನ್ನು ನೀಡಲಾಗಿತ್ತು. ಅನಂತರ ಯಾವುದೇ ಸರಕಾರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಪ್ರಸ್ತುತ ವಾರಹಿ ನೀರನ್ನು ಕೂಡಾ ತಡೆಹಿಡಿಯಲಾಗಿದೆ. ಇದರಿಂದ ಈ ಭಾಗದಲ್ಲಿ ಅನೇಕ ಕೃಷಿ ಭೂಮಿ ಹಡಿಲು ಬೀಳುವಂತಾಗಿದೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಅನುದಾನ ಒದಗಿಸಿ ಕಬ್ಬು ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಅಡ್ವಕೇಟ್ ಎಲ್ಲೂರು ಶಶಿಧರ ಶೆಟ್ಟಿ, ಉಪಾಧ್ಯಕ್ಷರಾದ ಶೇಖರ ಕೋಟ್ಯಾನ್ ಬ್ರಹ್ಮಾವರ, ಕಾರ್ಯಧ್ಯಕ್ಷರಾದ ಪ್ರಕಾಶ್ ಪೂಜಾರಿ ಕೆರ್ವಾಶೆ, ಜಿಲ್ಲಾ ಕಿಸಾನ್ ಸಂಚಾಲಕರಾದ ಭಾಸ್ಕರ ಶೆಟ್ಟಿ ಕುಂದಾಪುರ, ರಾಜ್ಯ ಕಿಸಾನ್ ಕಾರ್ಯದರ್ಶಿಗಳಾದ ಉದಯ ಶೆಟ್ಟಿ ಕಾರ್ಕಳ, ನಾಗಪ್ಪ ಕೊಟ್ಟಾರಿ ವಂಡ್ಸೆ, ರಾಯ್ಸ್ ಮರ್ವಿನ್ ಫೆರ್ನಾಂಡಿಸ್ ಉದ್ಯಾವರ ಹಾಗೂ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಎರಡು ಜಿಲ್ಲೆಯ ರೈತರ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ :
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…