ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ವಂಚನೆ ಪ್ರಕರಣ :  ಶೀಘ್ರ ಚಾರ್ಜ್‌ಶೀಟ್‌ ಸಲ್ಲಿಕೆಗೆ ಕೆಲವೇ ದಿನಗಳಲ್ಲಿ ಆದೇಶ: ಜಯಪ್ರಕಾಶ್‌ ಹೆಗ್ಡೆ – vishwanews24

Featured, ಉಡುಪಿ

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ವಂಚನೆ ಪ್ರಕರಣ :  ಶೀಘ್ರ ಚಾರ್ಜ್‌ಶೀಟ್‌ ಸಲ್ಲಿಕೆಗೆ ಕೆಲವೇ ದಿನಗಳಲ್ಲಿ ಆದೇಶ: ಜಯಪ್ರಕಾಶ್‌ ಹೆಗ್ಡೆ

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್‌ ಹೆಗ್ಡೆ ತಿಳಿಸಿದರು.

ಶುಕ್ರವಾರ ಮಾಧ್ಯಮದವರೊಂ ದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನ ಹಿರಿಯ ಮುಖಂಡ ಪ್ರತಾಪ್‌ಚಂದ್ರ ಶೆಟ್ಟಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ನಾವು ಕೂಡ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದೇವೆ. ಬ್ರಹ್ಮಾವರ ಠಾಣೆಯ ಇನ್‌ಸ್ಪೆಕ್ಟರ್‌ ತನಿಖಾಧಿಕಾರಿಯಾಗಿದ್ದಾರೆ. ಸಹಕಾರಿ ಇಲಾಖೆಯ ಡೆಪ್ಯುಟಿ ರಿಜಿಸ್ಟರ್‌ ಅದರ ಎಂಡಿ ಆಗಿದ್ದಾರೆ.

ಕಾಪು ಬ್ರಹ್ಮಕಲಶೋತ್ಸವ :ಇದರಿಂದ ನಾಡಿಗೆ ಮಂಗಳ ಉಂಟಾಗಲಿದೆ : ಎಡನೀರು ಶ್ರೀ – vishwanews24

ಹಾಗಾಗಿ ಚಾರ್ಜ್‌ಶೀಟ್‌ ಮಾಡಲು ಸರಕಾರದ ಪೂರ್ವಾನುಮತಿ ಬೇಕಾಗುತ್ತದೆ. ಪೂರ್ವಾನುಮತಿಯ ಭಾಗವಾಗಿ ಈಗಾಗಲೇ ಸಹಕಾರ ಸಚಿವ ರಾಜಣ್ಣ ಸಹಿ ಮಾಡಿದ್ದಾರೆ. ಒಂದೆರಡು ದಿನಗಳಲ್ಲಿ ಕಾರ್ಯದರ್ಶಿಯವರಿಂದ ಆದೇಶ ನಿರೀಕ್ಷಿಸಲಾಗುತ್ತಿದೆ. ಅನಂತರ ಸರ್ಕಲ್‌ ಇನ್‌ಸ್ಪೆಕ್ಟರ್‌ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.

Leave a Reply