ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ ಸಲ್ಲಿಕೆಗೆ ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದರು.
ಶುಕ್ರವಾರ ಮಾಧ್ಯಮದವರೊಂ ದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನ ಹಿರಿಯ ಮುಖಂಡ ಪ್ರತಾಪ್‌ಚಂದ್ರ ಶೆಟ್ಟಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ನಾವು ಕೂಡ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದೇವೆ. ಬ್ರಹ್ಮಾವರ ಠಾಣೆಯ ಇನ್‌ಸ್ಪೆಕ್ಟರ್ ತನಿಖಾಧಿಕಾರಿಯಾಗಿದ್ದಾರೆ. ಸಹಕಾರಿ ಇಲಾಖೆಯ ಡೆಪ್ಯುಟಿ ರಿಜಿಸ್ಟರ್ ಅದರ ಎಂಡಿ ಆಗಿದ್ದಾರೆ.
ಹಾಗಾಗಿ ಚಾರ್ಜ್‌ಶೀಟ್ ಮಾಡಲು ಸರಕಾರದ ಪೂರ್ವಾನುಮತಿ ಬೇಕಾಗುತ್ತದೆ. ಪೂರ್ವಾನುಮತಿಯ ಭಾಗವಾಗಿ ಈಗಾಗಲೇ ಸಹಕಾರ ಸಚಿವ ರಾಜಣ್ಣ ಸಹಿ ಮಾಡಿದ್ದಾರೆ. ಒಂದೆರಡು ದಿನಗಳಲ್ಲಿ ಕಾರ್ಯದರ್ಶಿಯವರಿಂದ ಆದೇಶ ನಿರೀಕ್ಷಿಸಲಾಗುತ್ತಿದೆ. ಅನಂತರ ಸರ್ಕಲ್ ಇನ್‌ಸ್ಪೆಕ್ಟರ್ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…