Featured

ಬ್ರಿಟನ್‌ನಲ್ಲಿ ಹೊಸ ಮಾದರಿಯ ಕೊರೊನಾ ವೈರಸ್‌ : ಬ್ರಿಟನ್‌ನಿಂದ ಭಾರತಕ್ಕೆ ಬರುವ ವಿಮಾನಗಳ ಸ್ಥಗಿತ -Vishwanews24

ಬ್ರಿಟನ್‌ನಲ್ಲಿ ಹೊಸ ಮಾದರಿಯ ಕೊರೊನಾ ವೈರಸ್‌ : ಬ್ರಿಟನ್‌ನಿಂದ ಭಾರತಕ್ಕೆ ಬರುವ ವಿಮಾನಗಳ ಸ್ಥಗಿತ -Vishwanews24

ನವದೆಹಲಿ:ಬ್ರಿಟನ್ ನಲ್ಲಿ ರೂಪಾಂತರಗೊಂಡ ನೂತನ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವುದರಿಂದ ಭಾರತ ಮುಂಜಾಗ್ರತಾ ಕ್ರಮವಾಗಿ ಬ್ರಿಟನ್ ನಿಂದ ಆಗಮಿಸುವ ಎಲ್ಲಾ ವಿಮಾನಗಳಿಗೆ ಡಿಸೆಂಬರ್ 31ರವರೆಗೆ ನಿರ್ಬಂಧ ವಿಧಿಸಿರುವುದಾಗಿ ವರದಿ ತಿಳಿಸಿದೆ.

ಬ್ರಿಟನ್ ನಲ್ಲಿ ಕೋವಿಡ್ ಹೊಸ ಪ್ರಬೇಧ ಕ್ಷಿಪ್ರವಾಗಿ ಹರಡುತ್ತಿದ್ದು, ದೇಶದಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನ ಸಂಚಾರವನ್ನು ಡಿಸೆಂಬರ್ 31ರವರೆಗೂ ನಿಷೇಧಿಸಲು ನಿರ್ಧಾರ ಕೈಗೊಂಡಿರುವುದಾಗಿ ಭಾರತ ಹೇಳಿದೆ.

ಭಾರತದಿಂದ ಬ್ರಿಟನ್ ಗೆ ತೆರಳುವ ವಿಮಾನ ಸಂಚಾರವನ್ನೂ ಕೂಡಾ ಈ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಬ್ರಿಟನ್ ನಿಂದ ನಾಳೆ ಮಧ್ಯರಾತ್ರಿ ಭಾರತಕ್ಕೆ ಆಗಮಿಸಲಿರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಆರ್ ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗುವುದು ಎಂದು ವಿವರಿಸಿದೆ.

“ಬ್ರಿಟನ್‌ನಲ್ಲಿರುವ ಸದ್ಯದ ಪರಿಸ್ಥಿತಿಯನ್ನು ಪರಿಗಣಿಸಿ, ಅಲ್ಲಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್‌ 31ರ ರಾತ್ರಿ 11.59ರವರೆಗೆ ತಾತ್ಕಾಲಿಕವಾಗಿ ರದ್ದುಗೊಳಿಸಲು ಭಾರತ ಸರಕಾರ ನಿರ್ಧರಿಸಿದೆ. ಡಿಸೆಂಬರ್‌ 22ರ ರಾತ್ರಿ 11.59ರಿಂದ ಈ ನಿಷೇಧ ಅನ್ವಯವಾಗಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.

ಬ್ರಿಟನ್ ನಲ್ಲಿ ಪತ್ತೆಯಾಗಿರುವ ಈ ಹೊಸ ವಿಧದ ವೈರಸ್ ಕುರಿತು ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸಿದೆ. ಯಾರೂ ಭಯ ಪಡುವ ಅಗತ್ಯವಿಲ್ಲ. ಸರ್ಕಾರ ಮುಂಜಾಗ್ರತೆಯಿಂದ ಕೆಲಸ ಮಾಡುತ್ತಿದೆ. ಕಳೆದ ಒಂದು ವರ್ಷದಲ್ಲಿ, ನೀವೇ ಕಂಡಂತೆ ಜನರ ರಕ್ಷಣೆಗೆ ಸಂಬಂಧಿಸಿದಂತೆ ಸರ್ಕಾರ ಸಾಕಷ್ಟು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ಆತಂಕ ಪಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ತಿಳಿಸಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

7 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

15 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

15 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

16 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

16 hours ago