Featured

ಬ್ರಿಟನ್‌ನಲ್ಲಿ ಹೊಸ ರೂಪದ ಕೊರೋನಾ ವೈರಸ್ ಪತ್ತೆ -ಉಡುಪಿಗೂ ಬ್ರಿಟನ್ನಿಂದ ಆಗಮಿಸಿದ ಎಂಟು ಮಂದಿ- ಪರೀಕ್ಷೆಯ ವರದಿ ನಿರೀಕ್ಷೆಯಲ್ಲಿ -vishwanews24

ಉಡುಪಿ: ಬ್ರಿಟನ್‌ನಲ್ಲಿ ಹೊಸ ರೂಪದ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರಿಂದ ಆತಂಕ ಸೃಷ್ಟಿಯಾಗಿದೆ. ಈ ಮಧ್ಯೆ ಉಡುಪಿ ಜಿಲ್ಲೆಗೆ ಬ್ರಿಟನ್‌ನಿಂದ 8 ಮಂದಿ ಆಗಮಿಸಿದ್ದಾರೆ. ಎಲ್ಲರನ್ನೂ ಮನೆಗಳಲ್ಲಿಯೇ ದಿಗ್ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಬ್ರಿಟನ್‌ನಿಂದ ಉಡುಪಿ ಜಿಲ್ಲೆಗೆ ಆಗಮಿಸಿದ 8 ಮಂದಿಯ ಗಂಟಲ ದ್ರವವನ್ನು ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯ ವರದಿ ನಿರೀಕ್ಷೆಯಲ್ಲಿದೆ. ಬ್ರಿಟನ್‌ನಿಂದ ಆಗಮಿಸಿದವರಲ್ಲಿ ಕಾರ್ಕಳ ತಾಲೂಕಿನ ನಾಲ್ವರು, ಉಡುಪಿ ತಾಲೂಕಿನ ಮೂವರು ಮತ್ತು ಕುಂದಾಪುರ ತಾಲೂಕಿನ ಒಬ್ಬರು ಸೇರಿದ್ದಾರೆ ಎಂದು ಡಿಎಚ್ಒ ಮಾಹಿತಿ ನೀಡಿದ್ದಾರೆ.
ಬ್ರಿಟನ್‌ನಲ್ಲಿ ಹೊಸ ವಿಧದ ಕೊರೋನಾ ಸೋಂಕು ಪತ್ತೆಯಾಗಿದ್ದು, ಅತಿ ವೇಗವಾಗಿ ಹರಡಬಲ್ಲ ಇದರ ಲಕ್ಷಣದಿಂದಾಗಿ ಆತಂಕ ಎದುರಾಗಿದೆ. ಈ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ದೇಶಗಳು ಬ್ರಿಟನ್‌ನಿಂದ ಬರುವ ವಿಮಾನಗಳನ್ನು ಸ್ಥಗಿತಗೊಳಿಸಿವೆ. ಈ ನಡುವೆ ಭಾರತದಲ್ಲೂ ಡಿ. 31ರವರೆಗೆ ಬ್ರಿಟನ್‌ನಿಂದ ಬರುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಈಗಾಗಲೇ ಬ್ರಿಟನ್‌ನಿಂದ ಭಾರತಕ್ಕೆ ಬಂದ 266 ಮಂದಿ ಪ್ರಯಾಣಿಕರಲ್ಲಿ, ದಿಲ್ಲಿ ಮತ್ತು ಕೋಲ್ಕತಾದಲ್ಲಿ 7 ಪ್ರಯಾಣಿಕರಲ್ಲಿ ಕೊರೋನಾ ವೈರಸ್ ಇರುವುದು ಪತ್ತೆಯಾಗಿದೆ.

Vishwa News 24

Recent Posts

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

13 minutes ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

22 minutes ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

35 minutes ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

5 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

5 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

5 hours ago