ಲಂಡನ್: ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು ಸಾರ್ವತ್ರಿಕ ಚುನಾವಣೆಯ ಸೋಲನ್ನು ಒಪ್ಪಿಕೊಂಡು ಶುಕ್ರವಾರ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಕನ್ಸರ್ವೇಟಿವ್ ಪಕ್ಷವು 14 ವರ್ಷಗಳ ನಂತರ ಹೀನಾಯ ಸೋಲು ಕಂಡಿದೆ. ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷವು ಐತಿಹಾಸಿಕ ಯುಕೆ ಚುನಾವಣೆಯಲ್ಲಿ ಪ್ರಚಂಡ ವಿಜಯ ಸಾಧಿಸಿದೆ.
UK ಸಂಸತ್ತಿನಲ್ಲಿ ಬಹುಮತವನ್ನು ಹೊಂದಲು ಲೇಬರ್ ಪಕ್ಷವು ಸಾಕಷ್ಟು ಸ್ಥಾನಗಳನ್ನು ಗೆದ್ದಿದ್ದು ಸರ್ಕಾರವನ್ನು ರಚಿಸಲು ಮುಂದಿನ ಹಾದಿ ಸುಲಭವಾಗಿದೆ. ಸಂಸತ್ತಿನ ಕೆಳಮನೆ ಹೌಸ್ ಆಫ್ ಕಾಮನ್ಸ್‌ನಲ್ಲಿ ಲೇಬರ್ ಪಕ್ಷವು ಸುಮಾರು 160 ಸ್ಥಾನಗಳ ಬಹುಮತವನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.
ಭಾರತೀಯ ಕಾಲಮಾನ ಇಂದು ಬೆಳಗ್ಗೆ 5 ಗಂಟೆ ವೇಳೆಗೆ ಮತ ಎಣಿಕೆ ಆರಂಭವಾಗಿದ್ದು, 650 ಸ್ಥಾನಗಳ ಪೈಕಿ 326 ಸ್ಥಾನಗಳನ್ನು ಲೇಬರ್ ಪಕ್ಷ ಗೆದ್ದುಕೊಂಡಿದೆ.
ದೇಶದ ಮೊದಲ ಬ್ರಿಟಿಷ್ ಭಾರತೀಯ ಮೂಲದ ಪ್ರಧಾನ ಮಂತ್ರಿ ರಿಷಿ ಸುನಕ್ ಉತ್ತರ ಇಂಗ್ಲೆಂಡ್‌ನಲ್ಲಿ 23,059 ಮತಗಳನ್ನು ಗಳಿಸಿ ತಮ್ಮದೇ ಆದ ರಿಚ್‌ಮಂಡ್ ಮತ್ತು ನಾರ್ತಲರ್ಟನ್ ಸ್ಥಾನವನ್ನು ಗೆದ್ದುಕೊಂಡಿದ್ದಾರೆ. ಆದರೆ 14 ವರ್ಷಗಳ ಸರ್ಕಾರದ ನಂತರ ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪಕ್ಷವನ್ನು ಅಧಿಕಾರಕ್ಕೆ ಮರಳಿಸುವಲ್ಲಿ ರಿಷಿ ಸುನಕ್ ವಿಫಲರಾದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…