Featured

ಬ್ರಿಟಿಷರ ಜತೆ ಕೈಜೋಡಿಸಿದ್ದ ದೇಶದ್ರೋಹಿಗಳು ಈಗ ಅಧಿಕಾರಕ್ಕೇರಿ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿದ್ದಾರೆ : ಡಿ.ಕೆ.ಶಿವಕುಮಾ‌ರ್ – vishwanews24

ಬ್ರಿಟಿಷರ ಜತೆ ಕೈಜೋಡಿಸಿದ್ದ ದೇಶದ್ರೋಹಿಗಳು ಈಗ ಅಧಿಕಾರಕ್ಕೇರಿ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿದ್ದಾರೆ : ಡಿ.ಕೆ.ಶಿವಕುಮಾ‌ರ್

ಬೆಂಗಳೂರು :: ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜತೆ ಕೈಜೋಡಿಸಿದ್ದ ದೇಶ ದ್ರೋಹಿಗಳು ಈಗ ಅಧಿಕಾರಕ್ಕೇರಿ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿದ್ದಾರೆ. ಇಂತಹ ಗೋಮುಖ ವ್ಯಾಘ್ರಗಳಿಂದ ದೇಶವನ್ನು ನಾವೆಲ್ಲರೂ ರಕ್ಷಿಸಬೇಕು ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ತೊಡಗಿಕೊಂಡ ರೀತಿಯನ್ನು ಯುವ ಪೀಳಿಗೆಗೆ ತಿಳಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ 6.5 ಲಕ್ಷ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ನಮ್ಮ ಪಕ್ಷ. ಪಕ್ಷದ ಸದಸ್ಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು ಎಂಬುದನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಅದೇ ಶಾಮಪ್ರಸಾದ ಮುಖರ್ಜಿ ಅವರು ಕ್ವಿಟ್ ಇಂಡಿಯಾ ಚಳವಳಿ ಹತ್ತಿಕ್ಕುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು. ಅಂತಹವರ ಹಿಂಬಾಲಕರು ಈಗ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ವಿಪರ್ಯಾಸ ಎಂದರು.

ಮಹಾತ್ಮಾಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಿದ್ದಕ್ಕೆ 100 ವರ್ಷಗಳಾಗುತ್ತಿವೆ. ಅದಕ್ಕಾಗಿ ವಿನೂತನ ರೀತಿಯ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

2 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

9 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

9 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

11 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

12 hours ago