ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸುತ್ತದೆ, ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮ : ಎಚ್ಚರಿಕೆ ನೀಡಿದ ಡಿಸಿಎಂ. ಪರಮೇಶ್ವರ್
ಬೆಂಗಳೂರು: ಈ ವರ್ಷವೂ ಟಿಪ್ಪು ಜಯಂತಿ ಆಚರಿಸಲು ಸರ್ಕಾರ ಬದ್ಧವಾಗಿದ್ದು. ಟಿಪ್ಪು ಜಯಂತಿ ವೇಳೆ ಹಿಂಸಾಚಾರ, ಪ್ರತಿಭಟನೆ ನಡೆಸಿ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಯಾರೇ ಪ್ರಯತ್ನಿಸಿದರೂ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ನಿನ್ನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆ ಲಾಭಕ್ಕಾಗಿ ಬಿಜೆಪಿಯವರು ಅನಗತ್ಯವಾಗಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ. ಅವರು ಎಷ್ಟೇ ವಿರೋಧಿಸಿದರೂ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಿಸಿಯೇ ಆಚರಿಸುತ್ತದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿದೆ ಎಂದರು.


