ಸಾವೊ ಪೌಲೋ: ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ ಸಾವೊ ಪಾಲೊ ಬಳಿ ಪತನಗೊಂಡಿದ್ದುಅದರಲ್ಲಿದ್ದ ಸಿಬ್ಬಂದಿ ಪ್ರಯಾಣಿಕರು ಸೇರಿ ಎಲ್ಲಾ 62 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋ ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್‌ಲೈನ್ Voepass ವಿಮಾನವು ಸಾವೊ ಪಾಲೊದಿಂದ ವಾಯುವ್ಯಕ್ಕೆ 80 ಕಿಮೀ (50 ಮೈಲುಗಳು) ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ.
ವಿಮಾನ ವಸತಿ ಪ್ರದೇಶದಲ್ಲಿ ಬಿದ್ದರೂ ನಾಗರಿಕರ ಸಾವು ನೋವಾಗಿಲ್ಲ ಎಂದು ವರದಿಯಾಗಿದೆ. ಪೈಲಟ್ ವಿಮಾನ ಮನೆಗಳ ಮೇಲೆ ಬೀಳುವುದನ್ನು ತಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ಮೇಲಿನಿಂದ ಗಿರಕಿ ಹೊಡೆಯುತ್ತಾ ಬೀಳುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಮಾನವು ಪತನ ಹೊಂದಲು ಕಾರಣವೇನು ಎಂಬುದರ ಬಗ್ಗೆ ಈಗ ತನಿಖೆ ಆರಂಭವಾಗಿದೆ. ಹವಾಮಾನ ವೈಪರಿತ್ಯದಿಂದ ಪೈಲಟ್ ಎಂಜಿನ್ ಮೇಲೆ ನಿಯಂತ್ರಣ ಕಳೆದುಕೊಂಡು ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. Voepass ಏರ್‌ಲೈನ್ಸ್ ಬ್ರೆಜಿಲ್‌ನ ನಾಲ್ಕನೇ ಅತಿದೊಡ್ಡ ನಾಗರಿಕ ವಿಮಾನಯಾನ ಸಂಸ್ಥೆಯಾಗಿದೆ.
ಏರ್‌ಬಸ್ ಮತ್ತು ಇಟಾಲಿಯನ್ ಏರೋಸ್ಪೇಸ್ ಗ್ರೂಪ್ ಲಿಯೊನಾರ್ಡೊ ಜಂಟಿ ಒಡೆತನದದ ಎಟಿಆರ್ (ATR) ಕಂಪನಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…