ಬ್ರೇಕಿಂಗ್‌ : ವಿಶ್ವಾಸಮತ ಯಾಚನೆಗೂ ಮುನ್ನವೇ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕಮಲ್ ನಾಥ್ -Vishwanews24

Featured, ರಾಷ್ಟ್ರ ನ್ಯೂಸ್

ಭೋಪಾಲ್‌: ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಮಧ್ಯ ಪ್ರದೇಶ ಬಿಕ್ಕಟ್ಟು ಕೊನೆಗೂ ಅಂತ್ಯವಾಗುವ ಕಾಲ ಸಮೀಪಿಸಿದೆ. ಮಧ್ಯ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಇಂದು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಸಿಎಂ ಕಮಲ್‌ನಾಥ್‌ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ಈ ಮೂಲಕ ಮಧ್ಯ ಪ್ರದೇಶ ಕಾಂಗ್ರೆಸ್‌ ಸರಕಾರ ಪತನವಾಗಿದೆ.

ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಮಲ್ ನಾಥ್ ಅವರು, ಇಂದು ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು ಜನರಿಂದ ಆಯ್ಕೆಯಾದ ಸರ್ಕಾರವನ್ನು ಹಣಬಲ ಮತ್ತು ತೋಳ್ಬಲದಿಂದ ಬಿಜೆಪಿ ಉರುಳಿಸುವ ಕೆಲಸ ಮಾಡಿದೆ. ಮಧ್ಯ ಪ್ರದೇಶವನ್ನು ಸೋಲಿಸಿ ತಾನು ಗೆಲ್ಲಲು ಬಿಜೆಪಿ ಮುಂದಾಗಿದೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.