ಬೆಂಗಳೂರು: ದೇಶದಲ್ಲೇ ಮೊದಲ ಬಾರಿ ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ಕೋವಿಡ್ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ.
ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಲವು ಸಚಿವರು ಮತ್ತು ತಜ್ಞರೊಂದಿಗೆ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ವರದಿಯ ಪ್ರಕಾರ ಒಮಿಕ್ರಾನ್ ಹೆಚ್ಚಿನ ತೀವ್ರತೆ ಹೊಂದಿಲ್ಲ. ಇದಿರಂದ ಯಾವುದೇ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದರು.
ನಿಯಮಗಳು:
ವಿಮಾನ ನಿಲ್ದಾಣದಲ್ಲಿ ಪ್ರತಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಪರೀಕ್ಷೆ ವರದಿ ಬಂದ ನಂತರವೇ ಪ್ರಯಾಣಿಕರನ್ನು ಹೊರಗೆ ಬಿಡಲಾಗುವುದು.
ಸಿನಿಮಾ ಹಾಲ್, ಮಾಲ್ ಗಳಿಗೆ ಪ್ರವೇಶಿಸಲು ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ.
ಶಾಲೆಗೆ ಹೋಗುವ ಮಕ್ಕಳಿರುವ ಹೆತ್ತವರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಇಲ್ಲದಿದ್ದಲ್ಲಿ ಶಾಲೆಗೆ ಮಕ್ಕಳನ್ನು ಕಳುಹಿಸುವಂತಿಲ್ಲ.
ಶಾಲೆ ಕಾಲೇಜುಗಳಲ್ಲಿ ಯಾವುದೇ ಸಮಾರಂಭ ನಡೆಸಲು ಅವಕಾಶವಿಲ್ಲ.
ಮದುವೆ ಸಮಾರಂಭಗಳಿಗೆ 500 ಜನರಿಗೆ ಮಾತ್ರ ಅವಕಾಶ.
ಕಂಟ್ರೋಲ್ ರೂಂ ಮತ್ತೆ ಆರಂಭ ಮಾಡಲಾಗುವುದು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…