Featured

‘ನೀರ್ ದೋಸೆ’ ಬ್ಯೂಟಿಫುಲ್ ಮನಸುಗಳು’ ಸಿನಿಮಾ ನಿರ್ಮಾಪಕ ಅರೆಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ನ ‘ನೀರ್ ದೋಸೆ’ ಸಿನಿಮಾ ನಿರ್ಮಾಪಕ ಆರ್. ಪ್ರಸನ್ನರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಪ್ರಸನ್ನ 2015 ರಲ್ಲಿ ಶೇಷಾದ್ರಿಪುರಂನ ಸಿಂಡಿಕೇಟ್ ಬ್ಯಾಂಕಿನಲ್ಲಿ ಮನೆ ಅಡಮಾನವಿಟ್ಟು ಸಾಲ ಪಡೆದಿಕೊಂಡಿದ್ದರು ಎನ್ನಲಾಗಿದ್ದು. ಇದಲ್ಲದೇ ಹೊಸಕೆರೆಹಳ್ಳಿ ಮನೆಯ ಭೂ ದಾಖಲೆಯನ್ನು ಕಲರ್ ಜೆರಾಕ್ಸ್ ಮಾಡಿಸಿ ಮೂರು ಕಡೆ ಸಾಲ ಪಡೆದಿದ್ದರು ಅಂತ ತಿಳಿದು ಬಂದಿದೆ.

ಇನ್ನು ಶೇಷಾದ್ರಿಪುರಂನ ಸಿಂಡಿಕೇಟ್ ಬ್ಯಾಂಕ್, ಕಿಲಾರಿ ರಸ್ತೆಯ ದೈವಜ್ಞ ಕೊ ಆಪರೇಟಿವ್ ಸೊಸೈಟಿ ಹಾಗು ಮಾರ್ಗದರ್ಶಿ ಚಿಟ್ಸ್ ನಲ್ಲಿ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ.

ಪ್ರಸನ್ನ ಎಲ್ಲ ಬ್ಯಾಂಕ್ ಗಳಿಗೂ ಒಂದೇ ಆಸ್ತಿ ಪತ್ರ ನೀಡಿ ಒಂದೇ ವಾರದಲ್ಲಿ ಒಂದು ಕೋಟಿ ಸಾಲ ಪಡೆದಿದ್ದರು. ಬ್ಯಾಂಕಿನವರು ಆಸ್ತಿ ಪತ್ರ ಪರಿಶೀಲನೆ ನಡೆಸಿದಾಗ ಕಲರ್ ಜೆರಾಕ್ಸ್ ಕೊಟ್ಟಿರುವುದು ಬೆಳಕಿಗೆ ಬಂದಿದೆ. ನಂತರ ಈ ಬಗ್ಗೆ ಪೊಲೀಸರಿಗೆ ದೂರು ಕೊಡುತ್ತೀವಿ ಎಂದಾಗ ಎರಡು ಕಂತುಗಳಲ್ಲಿ 17 ಲಕ್ಷ ರೂ. ಹಣ ವಾಪಸ್ ಮಾಡದ್ದರಂತೆ.

ಇನ್ನು ಬ್ಯಾಂಕಿಗೆ ಉಳಿದ 17 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಪ್ರಸನ್ನ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ದಾಶಿಕಾ ರಮೇಶ್ ದೂರು ನೀಡಿದ್ದರು. ಸದ್ಯಕ್ಕೆ ಶೇಷಾದ್ರಿಪುರಂ ಪೊಲೀಸರು ನಿರ್ಮಾಪಕ ಪ್ರಸನ್ನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

7 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

7 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago