ಬ್ರೇಕಿಂಗ್: ಸಿಎಂ ಸ್ಥಾನಕ್ಕೆ ರಾಜೀನಾಮೆ : ಬಿಎಸ್‌ವೈ ಘೋಷಣೆ -Vishwanews24
ಬ್ರೇಕಿಂಗ್: ಸಿಎಂ ಸ್ಥಾನಕ್ಕೆ ರಾಜೀನಾಮೆ : ಬಿಎಸ್‌ವೈ ಘೋಷಣೆ -Vishwanews24
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಭಾರಿ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆಗೆ ಸ್ವತಃ ಬಿ.ಎಸ್.ಯಡಿಯೂರಪ್ಪ ಅವರೇ ತೆರೆ ಎಳೆದಿದ್ದಾರೆ.
“ನಾನು ನಿಮ್ಮೆಲ್ಲರ ಅನುಮತಿ ಪಡೆದು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ, ಸಂತೋಷದಿಂದ ರಾಜೀನಾಮೆ ನೀಡುತ್ತಿರುವೆ. 75 ವರ್ಷ ದಾಟಿದ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಲ್ಲರೂ ಊಟ ಮಾಡಿದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ” ಎಂದು ಭಾರವಾದ ಮನಸ್ಸಿನಿಂದ ಹೇಳಿದರು.
