Featured

ಬ್ಲಾಸ್ಟ್ ವಿಚಾರದಲ್ಲಿ ರಾಜಕೀಯ ಮಾಡಬೇಡಿ : ಬಿಜೆಪಿ ವಿರುದ್ದ ಸಿದ್ದರಾಮಯ್ಯ ಕಿಡಿ – Vishwanews24

ಮಂಗಳೂರಿನ ಕುಕ್ಕರ್ ಬ್ಲಾಸ್ಟ್‌ಗು ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿಎಂ

ಮೈಸೂರು: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಗೂ ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್‍ಗೂ ಸಾಮ್ಯತೆ ಇಲ್ಲ. ಅದು ಕುಕ್ಕರನಲ್ಲಿ ಆದ ಬ್ಲಾಸ್ಟ್. ಆದರೆ ಇಲ್ಲಿ ಯಾವ ಕುಕ್ಕರ್ ನಲ್ಲೂ ಬ್ಲಾಸ್ಟ್ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಸ್ಕ್ ಹಾಗೂ ಟೋಪಿ ಹಾಕಿಕೊಂಡು ಬಂದ ಒಬ್ಬ ವ್ಯಕ್ತಿ ಈ ಸ್ಫೋಟ ನಡೆಸಿದ್ದಾನೆ. ತಿಂಡಿಯ ಟೋಕನ್ ತೆಗೆದುಕೊಂಡು ಹೋಟೆಲ್ ನಲ್ಲಿ ಕುಳಿತು ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿ ನಂತರ ಹೋಗಿದ್ದಾನೆ. ಅವನು ಬಸ್ಸಿನಿಂದ ಇಳಿಯುವುದು ಹೋಟೆಲ್ ಗೆ ಬರುವುದು ಎಲ್ಲಾ ದೃಶ್ಯಾವಳಿಗಳು ಸಿಕ್ಕಿವೆ ಎಂದರು.

ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಇದು ಒಬ್ಬ ವ್ಯಕ್ತಿಯ ಕೃತ್ಯವಾ? ಅಥವಾ ಸಂಘಟನೆಯ ಕೃತ್ಯವಾ ಎಂಬುದು ಗೊತ್ತಾಗಿಲ್ಲ. ಇದು ಭಯೋತ್ಪಾದಕ ಕೃತ್ಯನಾ ಎಂಬುದು ಕೂಡ ಸ್ಪಷ್ಟವಾಗಿಲ್ಲ. ಈ ಕುರಿತು ಎಲ್ಲವೂ ಇನ್ನೂ ತನಿಖೆಯ ಹಂತದಲ್ಲಿದೆ ಎಂದು ಹೇಳಿದರು.

ಬ್ಲಾಸ್ಟ್ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಇದೇ ವೇಳೆ ಅಲ್ಪಸಂಖ್ಯಾತ ತೃಷ್ಟಿಕರಣದಿಂರ ಇಂತಹ ಕೃತ್ಯ ನಡೆದಿದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿಯ ಕಾಲದಲ್ಲಿ ಆದ ಬಾಂಬ್ ಬ್ಲಾಸ್ಟ್ ಗಳಿಗೆ ಅವತ್ತು ಏನು ಕಾರಣ. ಅದು ಅಲ್ಪಸಂಖ್ಯಾತರ ತೃಷ್ಟಿಕರಣವಾ?. ಬಿಜೆಪಿ ರಾಜಕೀಯಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದೆ. ಅಲ್ಪಸಂಖ್ಯಾತರ ಪರಕ್ಕೂ ಇದಕ್ಕೂ ಏನು ಸಂಬಂಧ?. ಬಿಜೆಪಿ ಇದನ್ನು ರಾಜಕೀಯ ಮಾಡುತ್ತಿದೆ ಅಷ್ಟೇ. ಈ ವಿಚಾರದಲ್ಲಿ ರಾಜಕೀಯ ಯಾರು ಮಾಡಬಾರದು ಎಂದು ಮನವಿ ಮಾಡಿಕೊಂಡರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

3 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

3 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

3 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

4 hours ago