ಮೈಸೂರು: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಗೂ ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್‍ಗೂ ಸಾಮ್ಯತೆ ಇಲ್ಲ. ಅದು ಕುಕ್ಕರನಲ್ಲಿ ಆದ ಬ್ಲಾಸ್ಟ್. ಆದರೆ ಇಲ್ಲಿ ಯಾವ ಕುಕ್ಕರ್ ನಲ್ಲೂ ಬ್ಲಾಸ್ಟ್ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಸ್ಕ್ ಹಾಗೂ ಟೋಪಿ ಹಾಕಿಕೊಂಡು ಬಂದ ಒಬ್ಬ ವ್ಯಕ್ತಿ ಈ ಸ್ಫೋಟ ನಡೆಸಿದ್ದಾನೆ. ತಿಂಡಿಯ ಟೋಕನ್ ತೆಗೆದುಕೊಂಡು ಹೋಟೆಲ್ ನಲ್ಲಿ ಕುಳಿತು ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿ ನಂತರ ಹೋಗಿದ್ದಾನೆ. ಅವನು ಬಸ್ಸಿನಿಂದ ಇಳಿಯುವುದು ಹೋಟೆಲ್ ಗೆ ಬರುವುದು ಎಲ್ಲಾ ದೃಶ್ಯಾವಳಿಗಳು ಸಿಕ್ಕಿವೆ ಎಂದರು.
ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಇದು ಒಬ್ಬ ವ್ಯಕ್ತಿಯ ಕೃತ್ಯವಾ? ಅಥವಾ ಸಂಘಟನೆಯ ಕೃತ್ಯವಾ ಎಂಬುದು ಗೊತ್ತಾಗಿಲ್ಲ. ಇದು ಭಯೋತ್ಪಾದಕ ಕೃತ್ಯನಾ ಎಂಬುದು ಕೂಡ ಸ್ಪಷ್ಟವಾಗಿಲ್ಲ. ಈ ಕುರಿತು ಎಲ್ಲವೂ ಇನ್ನೂ ತನಿಖೆಯ ಹಂತದಲ್ಲಿದೆ ಎಂದು ಹೇಳಿದರು.
ಬ್ಲಾಸ್ಟ್ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಇದೇ ವೇಳೆ ಅಲ್ಪಸಂಖ್ಯಾತ ತೃಷ್ಟಿಕರಣದಿಂರ ಇಂತಹ ಕೃತ್ಯ ನಡೆದಿದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿಯ ಕಾಲದಲ್ಲಿ ಆದ ಬಾಂಬ್ ಬ್ಲಾಸ್ಟ್ ಗಳಿಗೆ ಅವತ್ತು ಏನು ಕಾರಣ. ಅದು ಅಲ್ಪಸಂಖ್ಯಾತರ ತೃಷ್ಟಿಕರಣವಾ?. ಬಿಜೆಪಿ ರಾಜಕೀಯಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದೆ. ಅಲ್ಪಸಂಖ್ಯಾತರ ಪರಕ್ಕೂ ಇದಕ್ಕೂ ಏನು ಸಂಬಂಧ?. ಬಿಜೆಪಿ ಇದನ್ನು ರಾಜಕೀಯ ಮಾಡುತ್ತಿದೆ ಅಷ್ಟೇ. ಈ ವಿಚಾರದಲ್ಲಿ ರಾಜಕೀಯ ಯಾರು ಮಾಡಬಾರದು ಎಂದು ಮನವಿ ಮಾಡಿಕೊಂಡರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…