ಭಕ್ತಾಭಿಮಾನಿಗಳ ಶ್ರದ್ಧಾ ಭಕ್ತಿಯ ಗಣೇಶೋತ್ಸವ ಆಚರಣೆಯಿಂದ ಕೊರೋನ ಮಹಾಮಾರಿಯ ಸಂಕಷ್ಟ ಶೀಘ್ರದಲ್ಲಿಯೇ ನಿವಾರಣೆಯಾಗಲಿ : ಯಶ್‍ಪಾಲ್ ಸುವರ್ಣ -Vishwanews24

ಉಡುಪಿ: ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಬಗ್ಗೆ ಹೊಸ ಮಾರ್ಗಸೂಚಿಯ ಮೂಲಕ ಸರಳವಾಗಿ ನಡೆಸಲು ಅನುಮತಿಯನ್ನು ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್. ಯಡಿಯೂರಪ್ಪರವರ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ರಾಜ್ಯದ ಅಸಂಖ್ಯ ಭಕ್ತರ ಭಾವನೆಗಳಿಗೆ ಸ್ಪಂದಿಸಿ ಕೋವಿಡ್ ಭೀತಿಯ ನಡುವೆಯೂ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಿಸಿ, ಅವಕಾಶ ಕಲ್ಪಿಸಿದ ರಾಜ್ಯ ಸರಕಾರ ಹಾಗೂ ಸಹಕರಿಸಿದ ಎಲ್ಲಾ ಸಚಿವರು, ಶಾಸಕರಿಗೆ ಹಾಗೂ ಸಂಸದರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಬಾಲ ಗಂಗಾಧರ ತಿಲಕ್‍ರವರು ಆರಂಭಿಸಿದ ಸಾರ್ವಜನಿಕ ಗಣೇಶೋತ್ಸವ ಇದೀಗ ದೇಶದ ಸಂಸ್ಕøತಿಯ ಭಾಗವಾಗಿದ್ದು, ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಈ ಬಾರಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ಪರಿಸರಸ್ನೇಹಿಯಾಗಿ ಆಚರಿಸುವಂತೆ ಮನವಿ ಮಾಡಿದ್ದಾರೆ.

ಭಕ್ತಾಭಿಮಾನಿಗಳ ಶ್ರದ್ಧಾ ಭಕ್ತಿಯ ಗಣೇಶೋತ್ಸವ ಆಚರಣೆಯಿಂದ ಕೊರೋನ ಮಹಾಮಾರಿಯ ಸಂಕಷ್ಟ ಶೀಘ್ರದಲ್ಲಿಯೇ ನಿವಾರಣೆಯಾಗಲಿ ಎಂದು ಆಶಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

8 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

8 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

9 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

12 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

12 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

12 hours ago