Featured

ಭಗತ್ ಸಿಂಗ್, ನಾರಾಯಣಗುರು ಪಾಠ ತೆಗೆದುಹಾಕಿಲ್ಲ :  ಸಚಿವ ಆರ್. ಅಶೋಕ್ ಸ್ಪಷ್ಟನೆ – Vishwanews24

ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ..

ನಾವು ಪಠ್ಯ ತೆಗೆದುಹಾಕಿದ್ದೇವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ..

ಹಿಂದುಗಳು ಮಲಗಿದ್ದರೆ ದೇಶ ಮಲಗಿರುತ್ತೆ ಎಂಬ ಭ್ರಮೆಯಲ್ಲಿದ್ದಾರೆ..

ಬೆಂಗಳೂರು : ನಮ್ಮ ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ, ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು ಎಂದು ಕಂದಾಯ ಸಚಿವ ಆರ್. ಅಶೋಕ್ ಆರೋಪಿಸಿದ್ದಾರೆ.

ಪಠ್ಯಪುಸ್ತಕ ವಿವಾದ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ, ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ಅನೇಕ ಜನರನ್ನು ಮತಾಂತರ ಮಾಡಿದ್ದ ಎಂದರು.

ನಮ್ಮ ಸರ್ಕಾರದಲ್ಲಿ ಭಗತ್ ಸಿಂಗ್, ನಾರಾಯಣಗುರು ಪಠ್ಯವನ್ನು ತೆಗೆದುಹಾಕಿಲ್ಲ. ನಾವು ಪಠ್ಯ ತೆಗೆದುಹಾಕಿದ್ದೇವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಕಾಲದಲ್ಲಿ ಸಿಂಧು ಸಂಸ್ಕೃತಿ ಕುರಿತ ಪಾಠ ಕೈಬಿಡಲಾಗಿತ್ತು. ನಿಟ್ಟೂರು ಶ್ರೀನಿವಾಸರಾಯರ ಪಾಠವನ್ನು ಕೈಬಿಡಲಾಗಿತ್ತು. ನಮ್ಮ ಸರ್ಕಾರ ರಾಣಿ ಚನ್ನಬೈರಾದೇವಿ ಅವರ ಪಾಠವನ್ನು ಸೇರಿಸಲಾಗಿದೆ ಎಂದರು.

ಹಿಂದಿನ ಸರ್ಕಾರವು ಕೆಲವು ಪಠ್ಯಗಳನ್ನು ತೆಗೆದು ಹಾಕಿದ್ದಾವೆ. ಇವರಿಗೆ ರಾಮ, ಈಶ್ವರ ಹೆಸರು ಕೇಳಲು ಇಷ್ಟವಿರಲ್ಲ. ಹಿಂದೆ ಅವರಿಗೆ ಬೇಕಾದಂತೆ ಪಠ್ಯ ಪರಿಷ್ಕರಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಸರ್ಕಾರದ ಪಠ್ಯಪರಿಷ್ಕರಣೆ ಅವಧಿಯಲ್ಲಿ ಕುವೆಂಪು ಅವರ 8 ಪದ್ಯಗಳನ್ನು ಸೇರಿಸಲಾಗಿದೆ. ಹಿಡನ್ ಅಜೆಂಟ್ ಇರುವ ಕೆಲ ಸಾಹಿತಿಗಳು ಭ್ರಮೆಯಲ್ಲಿದ್ದಾರೆ. ಹಿಂದುಗಳು ಮಲಗಿದ್ದರೆ ದೇಶ ಮಲಗಿರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲ ಪಠ್ಯ ಪುಸ್ತಕಗಳು ಬದಲಾವಣೆಯಾಗಿವೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಯಾರೂ ಯಾಕೆ ಧ್ವನಿ ಎತ್ತಲಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

21 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

21 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

21 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

22 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

22 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago