Featured

ಭಟ್ಕಳದಲ್ಲಿ ಸೂಕ್ತ ದಾಖಲೆಗಳಿಲ್ಲದೆ ನೆಲಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ – Vishwanews24

ಭಟ್ಕಳದಲ್ಲಿ ಸೂಕ್ತ ದಾಖಲೆಗಳಿಲ್ಲದೆ ನೆಲಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ – Vishwanews24

ಕಾರವಾರ : ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಕಳೆದ ಆರು ವರ್ಷಗಳಿಂದ ಭಟ್ಕಳದ ನವಾಯತ ಕಾಲೋನಿಯಲ್ಲಿ ವಾಸವಾಗಿದ್ದ ಪಾಕಿಸ್ತಾನಿ ಮಹಿಳೆಯೋರ್ವಳನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ ಎಂದು ಗುರುತಿಸಲಾಗಿದೆ.

ಈ ಮಹಿಳೆ ನವಾಯತ ಕಾಲೋನಿಯಲ್ಲಿ 2015ರಿಂದ ಅಕ್ರಮವಾಗಿ ವಾಸ್ತವ್ಯ ಮಾಡಿಕೊಂಡಿದ್ದು, ಮಹಿಳೆಯು ವೀಸಾ ಹಾಗೂ ವಾಸ್ತವ್ಯ ಮಾಡಲು ಪರವಾನಿಗೆಯನ್ನು ಕೂಡಾ ಹೊಂದಿಲ್ಲ ಎನ್ನಲಾಗಿದೆ.

ಪಾಕಿಸ್ತಾನ ಪ್ರಜೆಯಾಗಿರುವ ಖತೀಜಾ ಭಟ್ಕಳದ ನವಾಯತ ಕಾಲೋನಿಯ ನಿವಾಸಿ ಜಾವೀದ್ ಮೊಹಿದ್ದೀನ ರುಕ್ನುದ್ದೀನ್ ಈತನನ್ನು ಸುಮಾರು ಆರು ವರ್ಷಗಳ ಹಿಂದೆ ದುಬೈಯಲ್ಲಿ ವಿವಾಹವಾಗಿದ್ದು, ಬಳಿಕ 2014ರಲ್ಲಿ ಮೂರು ತಿಂಗಳ ವಿಸಿಟಿಂಗ್ ವೀಸಾದೊಂದಿಗೆ ಭಾರತಕ್ಕೆ ಬಂದು ಹಿಂತಿರುಗಿದ್ದ ಈಕೆಯು ಮತ್ತೆ ಪುನ: 2015ರಲ್ಲಿ ಯಾವುದೇ ಸೂಕ್ತ ದಾಖಲೆಯಿಲ್ಲದೇ ಭಾರತದೊಳಕ್ಕೆ ಬಂದು ಗೌಪ್ಯವಾಗಿ ಭಟ್ಕಳದಲ್ಲಿ ತನ್ನ ಮೂವರು ಮಕ್ಕಳೊಂದಿಗೆ ತನ್ನ ಪತಿಯ ಮನೆಯಾದ ನವಾಯತ ಕಾಲೋನಿಯ ವೈಟ್ ಹೌಸ್‌ನಲ್ಲಿ ನೆಲೆಸಿದ್ದಳು.

ಇನ್ನು ಅಕ್ರಮವಾಗಿ ಪ್ರವೇಶ ಪಡೆದಿದ್ದರೂ ಈಕೆಯಲ್ಲಿ ಇಲ್ಲಿನ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ, ರೇಶನ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಎಲ್ಲವೂ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಖಚಿತ ಮಾಹಿತಿಯನ್ನು ಕಲೆ ಹಾಕಿದ ಪೊಲೀಸ್ ಇಲಾಖೆ ಅಕ್ರಮವಾಗಿ ನೆಲೆಸಿರುವುದನ್ನು ಖಚಿತಪಡಿಸಿಕೊಂಡು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಮನೆಯನ್ನು ಶೋಧ ಮಾಡಿದಾಗ ಈಕೆಯು ಇರುವುದು ಖಚಿತವಾಗಿದ್ದು ಆಕೆಯನ್ನು ಬಂಧಿಸಿ ವಿದೇಶಿಯರ ಕಾಯ್ದೆ ಕಲಂ 14, 14 (ಎ)(ಬಿ), ಹಾಗೂ ಐ.ಪಿ.ಸಿ. ಕಲಂ 468 ಹಾಗೂ 471ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿಯಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago