ಕಾರವಾರ : ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಕಳೆದ ಆರು ವರ್ಷಗಳಿಂದ ಭಟ್ಕಳದ ನವಾಯತ ಕಾಲೋನಿಯಲ್ಲಿ ವಾಸವಾಗಿದ್ದ ಪಾಕಿಸ್ತಾನಿ ಮಹಿಳೆಯೋರ್ವಳನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ ಎಂದು ಗುರುತಿಸಲಾಗಿದೆ.
ಈ ಮಹಿಳೆ ನವಾಯತ ಕಾಲೋನಿಯಲ್ಲಿ 2015ರಿಂದ ಅಕ್ರಮವಾಗಿ ವಾಸ್ತವ್ಯ ಮಾಡಿಕೊಂಡಿದ್ದು, ಮಹಿಳೆಯು ವೀಸಾ ಹಾಗೂ ವಾಸ್ತವ್ಯ ಮಾಡಲು ಪರವಾನಿಗೆಯನ್ನು ಕೂಡಾ ಹೊಂದಿಲ್ಲ ಎನ್ನಲಾಗಿದೆ.
ಪಾಕಿಸ್ತಾನ ಪ್ರಜೆಯಾಗಿರುವ ಖತೀಜಾ ಭಟ್ಕಳದ ನವಾಯತ ಕಾಲೋನಿಯ ನಿವಾಸಿ ಜಾವೀದ್ ಮೊಹಿದ್ದೀನ ರುಕ್ನುದ್ದೀನ್ ಈತನನ್ನು ಸುಮಾರು ಆರು ವರ್ಷಗಳ ಹಿಂದೆ ದುಬೈಯಲ್ಲಿ ವಿವಾಹವಾಗಿದ್ದು, ಬಳಿಕ 2014ರಲ್ಲಿ ಮೂರು ತಿಂಗಳ ವಿಸಿಟಿಂಗ್ ವೀಸಾದೊಂದಿಗೆ ಭಾರತಕ್ಕೆ ಬಂದು ಹಿಂತಿರುಗಿದ್ದ ಈಕೆಯು ಮತ್ತೆ ಪುನ: 2015ರಲ್ಲಿ ಯಾವುದೇ ಸೂಕ್ತ ದಾಖಲೆಯಿಲ್ಲದೇ ಭಾರತದೊಳಕ್ಕೆ ಬಂದು ಗೌಪ್ಯವಾಗಿ ಭಟ್ಕಳದಲ್ಲಿ ತನ್ನ ಮೂವರು ಮಕ್ಕಳೊಂದಿಗೆ ತನ್ನ ಪತಿಯ ಮನೆಯಾದ ನವಾಯತ ಕಾಲೋನಿಯ ವೈಟ್ ಹೌಸ್‌ನಲ್ಲಿ ನೆಲೆಸಿದ್ದಳು.
ಇನ್ನು ಅಕ್ರಮವಾಗಿ ಪ್ರವೇಶ ಪಡೆದಿದ್ದರೂ ಈಕೆಯಲ್ಲಿ ಇಲ್ಲಿನ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ, ರೇಶನ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಎಲ್ಲವೂ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಖಚಿತ ಮಾಹಿತಿಯನ್ನು ಕಲೆ ಹಾಕಿದ ಪೊಲೀಸ್ ಇಲಾಖೆ ಅಕ್ರಮವಾಗಿ ನೆಲೆಸಿರುವುದನ್ನು ಖಚಿತಪಡಿಸಿಕೊಂಡು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಮನೆಯನ್ನು ಶೋಧ ಮಾಡಿದಾಗ ಈಕೆಯು ಇರುವುದು ಖಚಿತವಾಗಿದ್ದು ಆಕೆಯನ್ನು ಬಂಧಿಸಿ ವಿದೇಶಿಯರ ಕಾಯ್ದೆ ಕಲಂ 14, 14 (ಎ)(ಬಿ), ಹಾಗೂ ಐ.ಪಿ.ಸಿ. ಕಲಂ 468 ಹಾಗೂ 471ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿಯಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…