ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಂಳಬರ್‌ದ ಸುರೇಶ್ ಕಾರ್ವಿ ಎಂಬವರಿಗೆ ಸೇರಿದ ಮತ್ಯಾಂಜನೇಯ ಎಂಬ ಬೋಟ್‌ನಲ್ಲಿ ಆರು ಜನರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ತಾಂತ್ರಿಕ ಕಾರಣದಿಂದಾಗಿ ಭಟ್ಕಳದಿಂದ 19 ನಾಟಿಕನ್ ಮೈಲುದೂರದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆಯಾಗಿದೆ.
ಬೋಟ್ ನಲ್ಲಿ ಇದ್ದ ಆರು ಜನರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೋಟ್ ಸಂಪೂರ್ಣ ಮುಳುಗಡೆ ಆಗಿದ್ದರಿಂದ ಲಕ್ಷಾಂತರರೂಪಾಯಿ ಹಾನಿಯಾಗಿದ್ದು ಸ್ಥಳಕ್ಕೆ ಕರಾವಳಿ ಕಾವಲುಪಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ರಾತ್ರಿ ಅಂಕೋಲದಿಂದ ಭಟ್ಕಳದ ಅರಬ್ಬಿ ಸಮುದ್ರ ಭಾಗದಲ್ಲಿ ನಿಷೇಧಿತ ಲೈಟ್ ಪಿಷಿಂಗ್ ಗೆ ಈ ಬೋಟು ತೆರಳಿತ್ತು ಎಂದು ಪ್ರಾಥಮಿಕ ಮಾಹಿತಿ ದೊರೆತಿದೆ. ಜೊತೆಗೆ ಬೋಟ್ ಗೆ ವಿಮೆ ಕೂಡ ಮಾಡಿಸಿರಲಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಈ ಕುರಿತು ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಅದೃಷ್ಟವಶಾತ್ ಬೋಟ್ ನಲ್ಲಿ ಇದ್ದ ಎಲ್ಲರೂ ಪಾರಾಗಿದ್ದು ಬೋಟ್ ಮುಳುಗಡೆ ಆಗುವ ವೇಳೆ ಪಕ್ಕದಲ್ಲೇ ಮೀನುಗಾರಿಕೆ ನಡೆಸುತಿದ್ದ ಮೀನುಗಾರರು ಎಲ್ಲರನ್ನೂ ರಕ್ಷಣೆ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…