Featured

ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ : ಮೀನುಗಾರರ  ರಕ್ಷಣೆ -Vishwanews24

ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ : ಮೀನುಗಾರರ  ರಕ್ಷಣೆ -Vishwanews24

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಡೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಂಳಬರ್‌ದ ಸುರೇಶ್ ಕಾರ್ವಿ ಎಂಬವರಿಗೆ ಸೇರಿದ ಮತ್ಯಾಂಜನೇಯ ಎಂಬ ಬೋಟ್‌ನಲ್ಲಿ ಆರು ಜನರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ತಾಂತ್ರಿಕ ಕಾರಣದಿಂದಾಗಿ ಭಟ್ಕಳದಿಂದ 19 ನಾಟಿಕನ್ ಮೈಲುದೂರದ ಅರಬ್ಬಿ ಸಮುದ್ರದಲ್ಲಿ ಬೋಟ್‌ ಮುಳುಗಡೆಯಾಗಿದೆ.

ಬೋಟ್ ನಲ್ಲಿ ಇದ್ದ ಆರು ಜನರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೋಟ್ ಸಂಪೂರ್ಣ ಮುಳುಗಡೆ ಆಗಿದ್ದರಿಂದ ಲಕ್ಷಾಂತರರೂಪಾಯಿ ಹಾನಿಯಾಗಿದ್ದು ಸ್ಥಳಕ್ಕೆ ಕರಾವಳಿ ಕಾವಲುಪಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ರಾತ್ರಿ ಅಂಕೋಲದಿಂದ ಭಟ್ಕಳದ ಅರಬ್ಬಿ ಸಮುದ್ರ ಭಾಗದಲ್ಲಿ ನಿಷೇಧಿತ ಲೈಟ್ ಪಿಷಿಂಗ್ ಗೆ ಈ ಬೋಟು ತೆರಳಿತ್ತು ಎಂದು ಪ್ರಾಥಮಿಕ ಮಾಹಿತಿ ದೊರೆತಿದೆ. ಜೊತೆಗೆ ಬೋಟ್ ಗೆ ವಿಮೆ ಕೂಡ ಮಾಡಿಸಿರಲಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಈ ಕುರಿತು ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಅದೃಷ್ಟವಶಾತ್ ಬೋಟ್ ನಲ್ಲಿ  ಇದ್ದ ಎಲ್ಲರೂ ಪಾರಾಗಿದ್ದು ಬೋಟ್ ಮುಳುಗಡೆ ಆಗುವ ವೇಳೆ ಪಕ್ಕದಲ್ಲೇ ಮೀನುಗಾರಿಕೆ ನಡೆಸುತಿದ್ದ ಮೀನುಗಾರರು ಎಲ್ಲರನ್ನೂ ರಕ್ಷಣೆ ಮಾಡಿದ್ದಾರೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

51 minutes ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

1 hour ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

1 hour ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

2 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

3 hours ago