Featured

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ

ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಟ್ಕಳದ ಶಾರದಾಹೊಳೆಯಲ್ಲಿ ಇಂದು ನೆರವೇರಿದೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರದೇಶವೇ ಶೋಕ ಸಾಗರದಲ್ಲಿ ಮುಳುಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ  ಮೃತರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಭಟ್ಕಳದ ಇತಿಹಾಸದಲ್ಲಿ ಇಂತಹ ದುರಂತ ನಡೆದಿರಲಿಲ್ಲ. ಏಪ್ರಿಲ್-ಮೇ ತಿಂಗಳಲ್ಲಿ ಕಪ್ಪೆ ಚಿಪ್ಪು ತೆಗೆಯುವುದು ಸಾಮಾನ್ಯ. ಆದರೆ ಈ ದುರ್ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಾರಣ ಪತ್ತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: 

ಮೃತರ ಕುಟುಂಬಗಳಿಗೆ ಸರ್ಕಾರದ ನೆರವು ಸದಾ ಇರಲಿದ್ದು, ಚಿಕಿತ್ಸೆ ಪಡೆಯುತ್ತಿರುವವರ ವೈದ್ಯಕೀಯ ವೆಚ್ಚವನ್ನು ನಾನೇ ಭರಿಸುತ್ತೇನೆ. ಜೊತೆಗೆ ಮೃತರ ಮಕ್ಕಳ ಶಿಕ್ಷಣಕ್ಕೆ ಅಗತ್ಯ ನೆರವು ನೀಡಲು ಸಿದ್ಧನಿದ್ದೇನೆ ಎಂದು ಭರವಸೆಯ ಮಾತುಗಳನ್ನು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

8 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

8 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

9 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

10 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

13 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

13 hours ago