ಭಟ್ಕಳ, : ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಹೈನುಗಾರ ರೈತರಲ್ಲಿ ಆತಂಕ ಮೂಡಿಸಿದೆ.
ಕಳೆದ ಹತ್ತಾರು ದಿನಗಳಿಂದ ಈ ಭಾಗದ ರೋಗ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ ಸುಮಾರು 50 ಸಾವಿರ ರೂ.ಮೌಲ್ಯದ ಗಿರ್ ತಳಿಯ ಆಕಳೊಂದು ರೋಗಬಾಧೆಯಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಈ ಭಾಗದಲ್ಲಿ ಜಾನುವಾರುಗಳಲ್ಲಿ ರೋಗ ಉಲ್ಬಣಗೊಳ್ಳುತ್ತಿದೆ. ಆದರೆ ಈ ಬಗ್ಗೆ ಸ್ಥಳೀಯ ಪಂಚಾಯತ್ ಆಗಲಿ ಪಶು ಅಧಿಕಾರಿಗಳಾಗಲಿ ರೋಗದ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಹೈನುಗಾರ ರೈತರಿಗೆ ಮಾಹಿತಿ ನೀಡಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ.
“ತಾಲೂಕಿನಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಏರಿಕೆ ಕಾಣುತ್ತಿದ್ದು, ವ್ಯಾಕ್ಸಿನ್ ಕಾರ್ಯ ಭರದಿಂದ ಸಾಗಿದೆ. ತಾಲೂಕಿನಲ್ಲಿ ಈ ರೋಗಕ್ಕೆ ಸಾವನ್ನಪ್ಪಿದ ಮೊದಲ ಪ್ರಕರಣವಾಗಿದೆ. ಈಗಾಗಲೇ 11,000ಕ್ಕೂ ಅಧಿಕ ಜಾನುವಾರುಗಳಿಗೆ ವ್ಯಾಕ್ಸಿನ್ ನೀಡಲಾಗಿದೆ. ಸಿಬ್ಬಂದಿಯ ಕೊರತೆಯಿಂದ ವ್ಯಾಕ್ಸಿನ್ ಕಾರ್ಯ ಕುಂಠಿತಗೊಳ್ಳುತ್ತಿದೆ. ರೈತರು ರೋಗ ಕಂಡುಬಂದ ಜಾನುವಾರನ್ನು ಪ್ರತ್ಯೇಕವಿಟ್ಟು ಔಷಧೋಪಚಾರ ಮಾಡಿದ್ದಲ್ಲಿ ರೋಗ ಹತೋಟಿಗೆ ತರಬಹುದು. ಒಂದೊಮ್ಮೆ ರೋಗದಿಂದ ಜಾನುವಾರು ಸಾವನ್ನಪ್ಪದಲ್ಲಿ ಸ್ಥಳೀಯ ಪಶು ಇಲಾಖೆಗೆ ಮಾಹಿತಿ ನೀಡಿದರೆ ಸರಕಾರದಿಂದ ಸಿಗುವ ಪರಿಹಾರ ದೊರಕಿಸಿಕೊಡಲಾಗುವುದು.”
-ಡಾ. ಶಿವಕುಮಾರ ಪಶು ವೈದ್ಯಾಧಿಕಾರಿ, ಭಟ್ಕಳ
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…