Featured

ಭಟ್ಕಳ: ಬಾಲಕನ ಅಪಹರಣ ಪ್ರಕರಣ: ಮೂವರ ಬಂಧನ – Vishwanews24

ಭಟ್ಕಳ: ಬಾಲಕನ ಅಪಹರಣ ಪ್ರಕರಣ: ಮೂವರ ಬಂಧನ

ಭಟ್ಕಳದ ಹೆಬಳೆ ನಿವಾಸಿಗಳಾದ ಅಬ್ರಾರ್ ಶೇಖ್ ಹಾಗೂ ಮೊಹಮ್ಮದ್ ಮಂಝೂರ್ ಬಂಧಿತರು..

ಭಟ್ಕಳ: ಪಟ್ಟಣದ ಆಜಾದ್ ನಗರದಿಂದ ಎಂಟು ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪ್ರಕರಣ ಪ್ರಮುಖ ಆರೋಪಿ, ಬಾಲಕನ ಅಜ್ಜ (ಅಮ್ಮನ ಸೋದರ ಮಾವ) ಇನಾಯತ್ ಉಲ್ಲಾ, ಸೌದಿ ಅರೇಬಿಯಾ ದೇಶದಲ್ಲಿದ್ದಾರೆ.

ಅವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬೆಂಗಳೂರು : ವೋಟರ್ ಐಡಿಗೆ ಆಧಾರ್ ನಂಬರ್​​ ಲಿಂಕ್ ಕಡ್ಡಾಯವಲ್ಲ: ಚುನಾವಣಾ ಆಯೋಗ – Vishwanews24

ಸೋಮವಾರ ಬೆಳಿಗ್ಗೆ ಗೋವಾದ ಕಲಂಗುಟ್‌ನಲ್ಲಿ ಬಾಲಕನನ್ನು ಪೊಲೀಸರು ರಕ್ಷಿಸಿ ಪಾಲಕರ ಮಡಿಲು ಸೇರಿಸಿದ್ದರು. ಅಲ್ಲೇ ಸೆರೆಸಿಕ್ಕಿದ್ದ ಆರೋಪಿ ಮಹಮ್ಮದ್ ಅನೀಸ್ ನೀಡಿದ ಮಾಹಿತಿಯ ಪ್ರಕಾರ ಕಾರ್ಯಾಚರಣೆ ಮುಂದುವರಿಸಿದ ಪೊಲೀಸರು ಮತ್ತಿಬ್ಬರನ್ನು ಭಟ್ಕಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಟ್ಕಳದ ಹೆಬಳೆ ನಿವಾಸಿಗಳಾದ ಅಬ್ರಾರ್ ಶೇಖ್ ಹಾಗೂ ಮೊಹಮ್ಮದ್ ಮಂಝೂರ್ ಬಂಧಿತರು.ಅಪಹರಣವಾದ ಬಾಲಕನ ತಂದೆ ಹಾಗೂ ಅಜ್ಜನ (ಅಮ್ಮನ ಮಾವ) ಇನಾಯತ್ ಉಲ್ಲಾ ಜೊತೆ ಹಣದ ವ್ಯವಹಾರ ನಡೆದಿತ್ತು. ಹಣ ಮರುಪಾವತಿ ಮಾಡಲು ಒತ್ತಡ ಹೇರುವ ಸಲುವಾಗಿ ಬಾಲಕನನ್ನು ಇನಾಯತ್ ಅಪಹರಣ ಮಾಡಿಸಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿತ್ತು. ಕೃತ್ಯದಲ್ಲಿ ಒಟ್ಟು ಐವರು ಭಾಗಿಯಾಗಿರುವ ಬಗ್ಗೆ ಮೇಲ್ನೋಟಕ್ಕೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಮೂವರ ಬಂಧನವಾಗಿದ್ದು, ಮತ್ತಿಬ್ಬರಿಗೆ ಕಾರ್ಯಾಚರಣೆ ನಡೆಸಿದ್ದಾರೆ.

ಘಟನೆ ನಡೆದು 30 ಗಂಟೆಗಳ ಒಳಗಾಗಿ ಬಾಲಕನನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಭಟ್ಕಳಕ್ಕೆ ಕರೆತಂದಿರುವುದು ಮತ್ತು ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಟ್ಕಳ: ಬ್ರೆಡ್ ತರಲು ಹೋಗಿ ನಾಪತ್ತೆಯಾಗಿದ್ದ ಬಾಲಕ ಗೋವಾದಲ್ಲಿ ಪತ್ತೆ..

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago