ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

Featured, ರಾಜ್ಯ ನ್ಯೂಸ್

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು

ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ–66ರ ಮುರ್ಡೇಶ್ವರ ಸಮೀಪದ ಬಸ್ತಿ ಜಂಕ್ಷನ್ ನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಮುರ್ಡೇಶ್ವರ ಸಮೀಪದ ಸಬ್ಬತ್ತಿ ನಿವಾಸಿ ಕೃಷ್ಣ ಶನಿಯಾರ್ ನಾಯ್ಕ (55) ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದ ಬೆನ್ನಲ್ಲೇ ಹೆದ್ದಾರಿ ಚತುಷ್ಪಥ ಕಾಮಗಾರಿಯ ಅವೈಜ್ಞಾನಿಕ ವಿನ್ಯಾಸವೇ ಇಲ್ಲಿ ಅಪಘಾತಗಳು ಸಂಭವಿಸಲು ಕಾರಣವಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ  :

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ಪೊಲೀಸ್ ಮೂಲಗಳ ಪ್ರಕಾರ, ಕೃಷ್ಣ ಶನಿಯಾರ್ ನಾಯ್ಕ ಭಟ್ಕಳದಿಂದ ಮುರ್ಡೇಶ್ವರದತ್ತ ಬೈಕಿನಲ್ಲಿ ತೆರಳುತ್ತಿದ್ದರು. ಬಸ್ತಿ ಜಂಕ್ಷನ್ ನಲ್ಲಿ ಹೆದ್ದಾರಿಯನ್ನು ದಾಟಲು ನಿಂತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಬೈಕಿಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೃಷ್ಣ ಶನಿಯಾರ್ ನಾಯ್ಕ ರಸ್ತೆಗೆ ಎಸೆಯಲ್ಪಟ್ಟು, ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರತಿಭಟನೆ

ಘಟನೆಯ ಬಳಿಕ ನೂರಾರು ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ಆರಂಭಿಸಿದರು. ರಾಷ್ಟ್ರೀಯ ಹೆದ್ದಾರಿ–66ರ ಚತುಷ್ಪಥ ಕಾಮಗಾರಿಯನ್ನು ಅವೈಜ್ಞಾನಿಕ ಹಾಗೂ ಕಳಪೆ ರೀತಿಯಲ್ಲಿ ರೂಪಿಸಿರುವುದರಿಂದ ಈ ಜಂಕ್ಷನ್ ನಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು.

ಪ್ರತಿಭಟನಾಕಾರರು ಲಾರಿಯಡಿ ಸಿಲುಕಿದ್ದ ಬೈಕ್ ಹಾಗೂ ಮೃತದೇಹವನ್ನು ಸ್ಥಳಾಂತರಿಸಲು ಅಧಿಕಾರಿಗಳಿಗೆ ಅವಕಾಶ ನೀಡದೆ ತೀವ್ರ ವಿರೋಧ ವ್ಯಕ್ತಪಡಿಸಿದರು .

ಇದನ್ನೂ ಓದಿ

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಮಾಹಿತಿ ತಿಳಿಯುತ್ತಿದ್ದಂತೆ ಮುರ್ಡೇಶ್ವರ ಹಾಗೂ ಭಟ್ಕಳ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಉಪವಿಭಾಗಾಧಿಕಾರಿ (ಡಿವೈಎಸ್ಪಿ), ಸಹಾಯಕ ಆಯುಕ್ತರು, ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

ಈ ಕುರಿತಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply