ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ತಂಡವೊಂದು ಸೋಮವಾರ ಕಡಲಿನಲ್ಲಿ ಇಳಿದ ಸಂದರ್ಭ ಓರ್ವ ನೀರು ಪಾಲಾಗಿದ್ದರೆ ಮತ್ತಿಬ್ಬರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ನಿವಾಸಿಗಳ 22 ಜನರ ಗುಂಪೊಂದು ಸಿಗಂದೂರು, ಕೊಲ್ಲೂರು ಪ್ರವಾಸ ಮುಗಿಸಿ ಸೋಮವಾರ ಮುರುಡೇಶ್ವರಕ್ಕೆ ಆಗಮಿಸಿದ್ದರು.
ಸಮುದ್ರದ ಆಳೆತ್ತರ ಅಲೆಯನ್ನು ಲೆಕ್ಕಿಸದೇ ಸಮುದ್ರಕ್ಕಿಳಿದು ಆಟವಾಡುವ ವೇಳೆ ಮೂವರು ಅಲೆಯ ರಭಸಕ್ಕೆ ಸಿಕ್ಕಿ ಕೊಚ್ಚಿಕೊಂಡು ಹೋಗಿದ್ದರು.
ಇದರದಲ್ಲಿ ಸಂತೋಷ ಹುಲಿಗುಂಡೆ (19) ಎನ್ನುವ ಯುವಕ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು ಹಸನ್ ಮಜಗಿಗೌಡ (21) ಹಾಗೂ ಸಂಜೀವ ಹೆಬ್ಬಳ್ಳಿ (20) ಎನ್ನುವವರನ್ನು ರಕ್ಷಣೆ ಮಾಡಲಾಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಅರಬ್ಬಿ ಸಮುದ್ರದಲ್ಲಿ ಬಿಪರ್‌ಜೋಯ್ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಚಂಡಮಾರುತದ ಸಮಯದಲ್ಲಿ ಸಮುದ್ರಕ್ಕೆ ಸಮೀಪಿಸದಂತೆ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಆದ್ರೂ ಪ್ರವಾಸಿಗರು ಅಧಿಕಾರಿಗಳ ಮಾತು ಕೇಳದೇ ನೀರಿಗಿಳಿದು ಅಪಾಯವನ್ನು ಅಹ್ವಾನಿಸುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…