Featured

ಭಟ್ಕಳ:  ಮುರುಡೇಶ್ವರ ಸಮುದ್ರದಲ್ಲಿ ಈಜಲು ಬಂದ ಇಬ್ಬರು ಪ್ರವಾಸಿಗರು ಮುಳುಗಿ ನಾಪತ್ತೆ ; ಮೂವರ ರಕ್ಷಣೆ – Vishwnaews24

ಭಟ್ಕಳ:  ಮುರುಡೇಶ್ವರ ಸಮುದ್ರದಲ್ಲಿ ಈಜಲು ಬಂದ ಇಬ್ಬರು ಪ್ರವಾಸಿಗರು ಮುಳುಗಿ ನಾಪತ್ತೆ ; ಮೂವರ ರಕ್ಷಣೆ – Vishwnaews24

ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಸಮುದ್ರದಲ್ಲಿ ಇಬ್ಬರು ಪ್ರವಾಸಿಗರು ಮುಳುಗಿ ನಾಪತ್ತೆಯಾಗಿದ್ದು, ಮೂವರನ್ನು ರಕ್ಷಿಸಿದ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಅವರಲ್ಲಿ ಅಬ್ರಾರ್ ಶೇಖ್ (21) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಶಿವಮೊಗ್ಗ ಜಿಲ್ಲೆಯ ಆಗೊಂಬೆಯಿಂದ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಮೂವರು ಸದಸ್ಯರಲ್ಲಿ ಸುಶಾಂತ ಎಂ.ಎಸ್. (23) ಎಂಬ ಯುವಕ ಸಮುದ್ರಪಾಲಾಗಿದ್ದಾನೆ ಎಂದು ಮುರುಡೇಶ್ವರ ಪೊಲೀಸರು ಮಾಹಿತಿ ನೀಡಿದ್ದಾರೆ.

ಶ್ರೀನಿವಾಸ್‌ಪುರದ 12 ಯುವಕರು ಮುರುಡೇಶ್ವರ ಸಮುದ್ರದಲ್ಲಿ ಈಜುತ್ತಿದ್ದಾಗ ಇದ್ದಕ್ಕಿ ದ್ದಂತೆ ದೊಡ್ಡ ಅಲೆಯೊಂದು ಬಂದು ಮೂವರನ್ನು ಸೆಳೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಇಬ್ಬರು ಯುವಕರನ್ನು ರಕ್ಷಿಸಿದ್ದು, ಅಬ್ರಾರ್ ಶೇಖ್ ಎಂಬಾತನು ಅಲೆಗಳ ನಡುವೆ ಕಣ್ಮರೆಯಾಗಿದ್ದಾನೆ.

ಅದೇ ರೀತಿ ಆಗೊಂಬೆಯ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಈಜಾಡುತ್ತಿದ್ದಾಗ ಸುಶಾಂತ್ ಮತ್ತು ಆತನ ಚಿಕ್ಕಪ್ಪ ಅಲೆಗಳಲ್ಲಿ ಮುಳುಗಲು ಆರಂಭಿಸಿದರು. ಈ ವೇಳೆ ಸ್ಥಳೀಯ ಮೀನುಗಾರರು ಸುಶಾಂತ್ ಚಿಕ್ಕಪ್ಪನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದರೆ ಸುಶಾಂತ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಇಬ್ಬರು ಯುವಕರಿಗಾಗಿ ಶೋಧ ಕಾರನಡೆಯುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ಮಹಾಬಲೇಶ್ವರ ನಾಯ್ಕ ಹಾಗೂ ಪಿ.ಎಸ್.ಐ ಪರಮಾನಂದ ಕೋಣ್ಣುರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ.

ಘಟನೆಯ ಬಗ್ಗೆ ಅಬ್ರಾರ್ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದು ಭಟ್ಕಳಕ್ಕೆ ತೆರಳುತ್ತಿದ್ದಾರೆ ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago