ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಸಮುದ್ರದಲ್ಲಿ ಇಬ್ಬರು ಪ್ರವಾಸಿಗರು ಮುಳುಗಿ ನಾಪತ್ತೆಯಾಗಿದ್ದು, ಮೂವರನ್ನು ರಕ್ಷಿಸಿದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಅವರಲ್ಲಿ ಅಬ್ರಾರ್ ಶೇಖ್ (21) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಶಿವಮೊಗ್ಗ ಜಿಲ್ಲೆಯ ಆಗೊಂಬೆಯಿಂದ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಮೂವರು ಸದಸ್ಯರಲ್ಲಿ ಸುಶಾಂತ ಎಂ.ಎಸ್. (23) ಎಂಬ ಯುವಕ ಸಮುದ್ರಪಾಲಾಗಿದ್ದಾನೆ ಎಂದು ಮುರುಡೇಶ್ವರ ಪೊಲೀಸರು ಮಾಹಿತಿ ನೀಡಿದ್ದಾರೆ.
ಶ್ರೀನಿವಾಸ್‌ಪುರದ 12 ಯುವಕರು ಮುರುಡೇಶ್ವರ ಸಮುದ್ರದಲ್ಲಿ ಈಜುತ್ತಿದ್ದಾಗ ಇದ್ದಕ್ಕಿ ದ್ದಂತೆ ದೊಡ್ಡ ಅಲೆಯೊಂದು ಬಂದು ಮೂವರನ್ನು ಸೆಳೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಇಬ್ಬರು ಯುವಕರನ್ನು ರಕ್ಷಿಸಿದ್ದು, ಅಬ್ರಾರ್ ಶೇಖ್ ಎಂಬಾತನು ಅಲೆಗಳ ನಡುವೆ ಕಣ್ಮರೆಯಾಗಿದ್ದಾನೆ.
ಅದೇ ರೀತಿ ಆಗೊಂಬೆಯ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಈಜಾಡುತ್ತಿದ್ದಾಗ ಸುಶಾಂತ್ ಮತ್ತು ಆತನ ಚಿಕ್ಕಪ್ಪ ಅಲೆಗಳಲ್ಲಿ ಮುಳುಗಲು ಆರಂಭಿಸಿದರು. ಈ ವೇಳೆ ಸ್ಥಳೀಯ ಮೀನುಗಾರರು ಸುಶಾಂತ್ ಚಿಕ್ಕಪ್ಪನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ, ಆದರೆ ಸುಶಾಂತ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಇಬ್ಬರು ಯುವಕರಿಗಾಗಿ ಶೋಧ ಕಾರನಡೆಯುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ಮಹಾಬಲೇಶ್ವರ ನಾಯ್ಕ ಹಾಗೂ ಪಿ.ಎಸ್.ಐ ಪರಮಾನಂದ ಕೋಣ್ಣುರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ.
ಘಟನೆಯ ಬಗ್ಗೆ ಅಬ್ರಾರ್ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದು ಭಟ್ಕಳಕ್ಕೆ ತೆರಳುತ್ತಿದ್ದಾರೆ ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…