ಭಟ್ಕಳ : ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳಿಂದಲೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಶಯ ವ್ಯಕ್ತಪಡಿಸಿದರು.
ಅವರು ಮಂಗಳವಾರ ಮುರ್ಡೇಶ್ವರದಲ್ಲಿ ಏರ್ಪಡಿಸಿದ್ದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.
ಮುರ್ಡೇಶ್ವರದಲ್ಲಿ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಮಹತ್ವದ್ದಾಗಿದೆ. ಇಲ್ಲಿಂದಲೇ ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ಪಡೆಯುವ ದೃಢ ಸಂಕಲ್ಪ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದ ಸಾಧನೆ ಕುರಿತು ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿ ಮನೆ ಮನೆಗಳಿಗೆ ತೆರಳಿ ತಿಳಿಸುವ ಕೆಲಸ ಮಾಡಬೇಕು ಎಂದರು.
ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ, ಆಯುಷ್ಮಾನ್ ಭಾರತ ಹಾಗೂ ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಪರಿಶಿಷ್ಟಪಂಗಡ, ಪರಿಶಿಷ್ಟಜಾತಿ, ಹಿಂದುಳಿದವರು, ರೈತರು, ದಲಿತರು, ಮೀನುಗಾರರು, ನೇಕಾರರು, ಟೈಲರ್‌ಗಳಿಗೆ ಮಹತ್ವದ ಯೋಜನೆಗಳನ್ನು ಜಾರಿಗೆಗೊಳಿಸಿ ಅನುಕೂಲ ಮಾಡಿಕೊಟ್ಟಿದೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಶಾಸಕರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ, ಸುನೀಲ ನಾಯ್ಕ ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ ಸ್ವಾಗತಿಸಿದರು. ಶಿವಮೊಗ್ಗದ ಗಿರೀಶ ಪಟೇಲ್ ನಿರ್ವಹಿಸಿದರು. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಲ್ಮಡಪ್ಪ ವಂದಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…