ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ, ಮುಸ್ಲಿಂ ಸಂಘರ್ಷಕ್ಕೆ ಟ್ಟಿಸ್ಟ್ ಸಿಕ್ಕಿದೆ. ಕಾರಿನಲ್ಲಿ ಅಪಹರಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮುಸ್ಲಿಂ ಯುವಕನನ್ನು ಅರೆಸ್ಟ್ ಮಾಡಲಾಗಿದ್ದು, ಲವ್ ಜಿಹಾದ್ ಆರೋಪ ಕೇಳಿಬಂದಿದೆ.
ಯುವತಿಯನ್ನ ಅಪಹರಿಸುವ ವೇಳೆ ಹಿಂದೂಪರ ಕಾರ್ಯಕರ್ತರು ಕಾರನ್ನು ತಡೆದು ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದರು. ಆದರೇ ಗ್ರಾಮೀಣ ಠಾಣೆ ಪೊಲೀಸರು ಹಿಂದೂ ಮುಖಂಡರ ವಿರುದ್ಧವೇ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿದ್ದನ್ನ ವಿರೋಧಿಸಿ ಹಿಂದೂಪರ ಕಾರ್ಯಕರ್ತರು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಬಂಧಿತ ಶಾಹೀದ್ ವಿರುದ್ಧ ಹಿಂದೂಪರ ಕಾರ್ಯಕರ್ತರು ಲವ್ ಜಿಹಾದ್ ಆರೋಪ ಮಾಡಿದ್ದಾರೆ.
ಇದನ್ನೂ ಓದಿ:
ಈ ಸಂಬಂಧ ಸಂತ್ರಸ್ತ ಯುವತಿ ಮುಸ್ಲಿಂ ಯುವಕನ ವಿರುದ್ಧ ದೂರು ನೀಡಿದ್ದು, ಬಲವಂತವಾಗಿ ಕಾರಿನಲ್ಲಿ ಅಪಹರಿಸಿ, ಬಳಿಕ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ್ದಳು. ಅದರಂತೆ ಪೊಲೀಸರು ಶಾಹೀದ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಬ್ಬರು ಕೂಡ ಭಟ್ಕಳದ ಸೂಪರ್ ಮಾರ್ಕೆಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶಾಹೀದ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ನಿನ್ನೆ ಮಾತನಾಡಬೇಕು ಬಾ ಎಂದು ಕರೆದು ಬಲವಂತವಾಗಿ ಕಾರಿನಲ್ಲಿ ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿರೋದಾಗಿ ಯುವತಿ ದೂರು ನೀಡಿದ್ದಾಳೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…