Featured

ಭಯೋತ್ಪಾದಕರು ದೇಶದಲ್ಲಿ ಅಟ್ಟಹಾಸ ಮೆರೆಯುವಾಗ ನಪುಂಸಕರಂತೆ ವರ್ತಿಸಿದ್ದು ಕಾಂಗ್ರೆಸ್‌ : ಸುನಿಲ್‌ಕುಮಾರ್‌ -Vishwanews24

ಕಾಶ್ಮೀರದಲ್ಲಿ ರಾಷ್ಟ್ರ ಧ್ವಜ ಹಾರಿಸಲು, ದೇಶದ ಗಡಿ ರಕ್ಷಿಸಲು ಮತ್ತು ಭಯೋತ್ಪಾದಕರ ಹುಟ್ಟಡಗಿಸಲು ಆರ್‌ಎಸ್‌ಎಸ್‌ನ ಮೋದಿ ಬರಬೇಕಾಯಿತು

ಬೆಂಗಳೂರು: ಹುಬ್ಬಳ್ಳಿ ಮತ್ತು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸಲು ಬಿಡದೇ ನಪುಂಸಕರಾಗಿ ವರ್ತಿಸಿದ್ದು ಕಾಂಗ್ರೆಸ್‌ ನಾಯಕರು ಎಂದು ಇಂಧನ ಸಚಿವ ವಿ.ಸುನಿಲ್‌ಕುಮಾರ್‌ ಕಿಡಿಕಾರಿದ್ದಾರೆ.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಇತರ ನಾಯಕರು ಮಾನಸಿಕ ವೇದನೆಗೆ ಒಳಗಾದಂತೆ ವರ್ತಿಸುತ್ತಿದ್ದಾರೆ. ಮೋದಿ ಮತ್ತು ಬೊಮ್ಮಾಯಿ ಅವರ ಜನಪರ ಆಡಳಿತವನ್ನು ಸಹಿಸದೇ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಭಯೋತ್ಪಾದಕರ ಮುಂದೆ ಮಂಡಿಯೂರಿದ್ದು ಕಾಂಗ್ರೆಸ್‌ ನಾಯಕರು. ಭಯೋತ್ಪಾದಕರು ದೇಶದಲ್ಲಿ ಅಟ್ಟಹಾಸ ಮೆರೆಯುವಾಗ ನಪುಂಸಕರಂತೆ ವರ್ತಿಸಿದ್ದು ಕಾಂಗ್ರೆಸ್‌ ಅಲ್ಲವೇ? ಆರ್‌ಎಸ್‌ಎಸ್‌ನ ಮೋದಿ ಬಂದ ಬಳಿಕ ಭಯೋತ್ಪಾದಕರನ್ನು ಬಗ್ಗು ಬಡಿಯಲಿಲ್ಲವೆ ಎಂದು ಪ್ರಶ್ನಿಸಿದರು.

ಕಾಶ್ಮೀರದ ಶ್ರೀನಗರದಲ್ಲಿ ರಾಷ್ಟ್ರಧ್ವಜ ಹಾರಿಸಲು ಸಾಧ್ಯವಾಗಿದ್ದು ಮೋದಿ ಪ್ರಧಾನಿ ಆದ ಬಳಿಕ. ಕಾಂಗ್ರೆಸ್‌ ನಾಯಕರು ನಪುಂಸಕರಾಗಿದ್ದರಿಂದಲೇ ಅಲ್ಲಿ ರಾಷ್ಟ್ರ ಧ್ವಜ ಹಾರಿಸಲು ಬಿಡಲಿಲ್ಲ. ಆದ್ದರಿಂದ ಕಾಂಗ್ರೆಸ್‌ಗೆ ರಾಷ್ಟ್ರಧ್ವಜದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದೂ ಸುನಿಲ್‌ ತಿಳಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಎಂದೂ ಆಡಳಿತ ಮತ್ತು ನಡವಳಿಕೆಯಲ್ಲಿ ದೇಶದ ಹಿತ ಕಾಯುವ ರೀತಿಯಲ್ಲಿ ನಡೆದು ಕೊಳ್ಳಲಿಲ್ಲ. ಕಾಶ್ಮೀರದಲ್ಲಿ ರಾಷ್ಟ್ರ ಧ್ವಜ ಹಾರಿಸಲು, ದೇಶದ ಗಡಿ ರಕ್ಷಿಸಲು ಮತ್ತು ಭಯೋತ್ಪಾದಕರ ಹುಟ್ಟಡಗಿಸಲು ಆರ್‌ಎಸ್‌ಎಸ್‌ನ ಮೋದಿ ಬರಬೇಕಾಯಿತು ಎಂದು ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago