Featured

ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೇನಾ ಶ್ವಾನ ‘ಜೂಮ್’ ನಿಧನ – Vishwanews24

ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೇನಾ ಶ್ವಾನ ‘ಜೂಮ್’ ನಿಧನ

ನವದೆಹಲಿ:  ಕಾಶ್ಮೀರದ ಅನಂತನಾಗ್‌ನಲ್ಲಿ ಭಯೋತ್ಪಾದಕರ ಮೇಲಿನ ಎನ್‌ಕೌಂಟರ್‌ನಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೇನಾ ಶ್ವಾನ ‘ಜೂಮ್’ ಗುರುವಾರ ಸಾವನ್ನಪ್ಪಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

54 ಎಎಫ್‌ವಿಹೆಚ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೂಮ್‌ ಹೆಸರಿನ ಸೇನಾ ಶ್ವಾನ ಇಂದು ಮಧ್ಯಾಹ್ನ 12 ಗಂಟೆ ಹೊತ್ತಿಗೆ ಮೃತಪಟ್ಟಿದೆ.

ಅನಂತನಾಗ್‌ನ ಕೋಕರ್‌ನಾಗ್‌ನಲ್ಲಿ ನಡೆದ ಯುದ್ಧ ಕಾರ್ಯಾಚರಣೆಯಲ್ಲಿ ‘ಜೂಮ್’ ಭಯೋತ್ಪಾದಕರ ಮೇಲೆ ದಾಳಿ ಮಾಡಿತ್ತು. ಈ ವೇಳೆ ಎರಡು ಗುಂಡು ತಗುಲಿ ಗಂಭೀರ ಗಾಯಗೊಂಡಿತ್ತು. ತಕ್ಷಣ ಶ್ವಾನವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

ಪೊಲೀಸ್ ಕಾನ್‌ಸ್ಟೆಬಲ್ ನೇಮಕಕ್ಕೆ ಅರ್ಜಿ ಆಹ್ವಾನ: ರಾಜ್ಯ ಸರ್ಕಾರ ಆದೇಶ – Vishwanews24

ಗುಂಡೇಟು ಬಿದ್ದರೂ ಜೂಮ್‌ ಶ್ವಾನ ಉಗ್ರರ ಮೇಲೆ ದಾಳಿ ಮುಂದುವರಿಸಿತ್ತು. ಭಯೋತ್ಪಾದಕರನ್ನು ನಿಗ್ರಹಿಸುವಲ್ಲಿಯೂ ಯಶಸ್ವಿಯಾಗಿತ್ತು.

ನಂತರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ. ಎನ್‌ಕೌಂಟರ್‌ನಲ್ಲಿ ‘ಜೂಮ್’ ಜೊತೆಗೆ ಇಬ್ಬರು ಸೈನಿಕರೂ ಗಾಯಗೊಂಡಿದ್ದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

10 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago