ನವದೆಹಲಿ, : ಈ ವರ್ಷದ ಅಕ್ಟೋವರ್ ತಿಂಗಳ ಒಳಗೆ ದೇಶದಲ್ಲಿ ಚಟುವಟಿಕೆ ನಡೆಸುತ್ತಿರುವ ಭಯೋತ್ಪಾದನಾ ಸಂಘಟನೆಗಳನ್ನು ಮಟ್ಟ ಹಾಕಬೇಕು ಎಂದು ಅಂತಾರಾಷ್ಟ್ರೀಯ ಮಟ್ಟದ ಹಣಕಾಸು ಕಾರ್ಯಪಡೆ (ಎಫ್‌ಎಟಿಎಫ್) ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ.
ವಿಶ್ವಸಂಸ್ಥೆ ಪಟ್ಟಿಮಾಡಿರುವ ಭಯೋತ್ಪಾದಕರ ವಿರುದ್ಧ ಕ್ರಮ ತೆಗೆದುಕೊಳ್ಳದೆ ಇದ್ದರೆ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಬೇಕಾಗುತ್ತದೆ ಎಂದು ತೀಕ್ಷ್ಣ ಎಚ್ಚರಿಕೆ ರವಾನಿಸಿದೆ.
ಪಾಕಿಸ್ತಾನವನ್ನು ಜಾಗತಿಕ ಕಾವಲುನಾಯಿ ಈಗಾಗಲೇ ‘ಬೂದು ಪಟ್ಟಿ’ಗೆ ಸೇರಿಸಿದೆ. ಅಕ್ರಮ ಹಣವರ್ಗಾವಣೆ ಮತ್ತು ಭಯೋತ್ಪಾದನೆಗೆ ಹಣಕಾಸು ಪೂರೈಕೆಯನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣಕ್ಕೆ ಪಾಕಿಸ್ತಾನದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಿದರೆ ಆ ದೇಶವು ಜಾಗತಿಕ ನಿರ್ಬಂಧನೆಗೆ ಒಳಪಡಬೇಕಾಗುತ್ತದೆ.
ಇದರಿಂದ ಅದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಸೇರಿದಂತೆ ಯಾವುದೇ ಜಾಗತಿಕ ಸಂಸ್ಥೆಗಳು ಹಾಗೂ ದೇಶಗಳಿಂದ ಆರ್ಥಿಕ ನೆರವನ್ನು ಪಡೆದುಕೊಳ್ಳದ ಸ್ಥಿತಿಗೆ ತಲುಪಲಿದೆ.
ಪಾಕಿಸ್ತಾನದ ನೆಲೆಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಸಕ್ರಿಯವಾಗಿದ್ದು, ಅದನ್ನು ತಡೆಯುವ ಕಾರ್ಯ ನಡೆಯುತ್ತಿಲ್ಲ. ಅಂತಾರಾಷ್ಟ್ರೀಯ ಸಂಸ್ಥೆ ನಿಗದಿಪಡಿಸಿದ ಗುಣಮಟ್ಟದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ದೂರಿದ್ದವು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…